Skip to content
Billava News

ಬಿಲ್ಲವಾಸ್ ಫ್ಯಾಮಿಲಿ ದುಬೈ ವತಿಯಿಂದ ಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವ ಆಚರಣೆ

“ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹತ್ವದ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವ...

By Billavavani
ಬಿಲ್ಲವಾಸ್ ಫ್ಯಾಮಿಲಿ ದುಬೈ ವತಿಯಿಂದ ಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವ ಆಚರಣೆ

ದುಬೈ: “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹತ್ವದ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನೋತ್ಸವದ ಅಂಗವಾಗಿ ಬಿಲ್ಲವಾಸ್ ಫ್ಯಾಮಿಲಿ ದುಬೈ ವತಿಯಿಂದ ಆರಾಧನಾ ಪೂಜಾ ಕಾರ್ಯಕ್ರಮವು ಸೆಪ್ಟೆಂಬರ್ 13, 2026ರ ಭಾನುವಾರದಂದು ದುಬೈಯ ಗ್ಲೆನ್‌ಡೆಲ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು.

Dubai billava (1).jpeg

ಕಾರ್ಯಕ್ರಮದ ಅಂಗವಾಗಿ ಪೂಜಾ ದುಬೈ ಅವರ ನಿರ್ದೇಶನದಲ್ಲಿ ಮಕ್ಕಳು ಹಾಗೂ ಮಹಿಳೆಯರ ತಂಡಗಳಿಂದ ನಡೆದ ಕುಣಿತ ಭಜನೆಯು ವಿಶೇಷ ಆಕರ್ಷಣೆಯಾಗಿತ್ತು. ಭಕ್ತಿಭಾವದಿಂದ ಮೂಡಿಬಂದ ಕುಣಿತ ಭಜನೆಯು ಕಾರ್ಯಕ್ರಮಕ್ಕೆ ಆಗಮಿಸಿದ್ದವರ ಮನಸೂರೆಗೊಂಡು, ಭಕ್ತಿಯ ವಾತಾವರಣವನ್ನು ಮತ್ತಷ್ಟು ಗಾಢಗೊಳಿಸಿತು.

Dubai billava (7).jpeg

ರಾಜರಾಜೇಶ್ವರಿ ಭಜನಾ ತಂಡದ ಸದಸ್ಯರ ಭಜನಾ ಸಂಕೀರ್ತನೆಯೊಂದಿಗೆ ಶ್ರೀ ನಾರಾಯಣಗುರುಗಳ ಪೂಜಾ ಕಾರ್ಯಕ್ರಮವು ಶ್ರೀ ರಘು ಭಟ್ ಅವರ ಪೌರೋಹಿತ್ಯದಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು.

Dubai billava (8).jpeg

ಕಾರ್ಯಕ್ರಮದಲ್ಲಿ ದುಬೈಯ ವಿವಿಧ ಸಮುದಾಯಗಳ ಮುಖಂಡರು ಹಾಗೂ ತುಳು-ಕನ್ನಡ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷರಾದ ದೀಪಕ್ ಎಸ್.ಪಿ. ಅವರು ಮಾತನಾಡಿ, ಸಂಸ್ಥೆಯ ವಿವಿಧ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ 2026–27ನೇ ಸಾಲಿನ ಕಾರ್ಯಕ್ರಮಗಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

Dubai billava (4).jpeg

ರಿತೇಶ್ ಅಂಚನ್ ಕುಲಶೇಖರ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.

ಬಿಲ್ಲವಾಸ್ ಫ್ಯಾಮಿಲಿ ದುಬೈಯ ಹಿರಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Dubai billava (2).jpegDubai billava (3).jpeg