Skip to content
Billava News

ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಆಚರಣೆ

ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮವು ಶುಕ್ರವಾರ ಘಟಕದ ಸಭಾಂಗಣದಲ್ಲಿ ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ನಡೆಯಿತು.

By Billavavani
ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಆಚರಣೆ

ಉಡುಪಿ, ಆ. 28: ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮವು ಶುಕ್ರವಾರ ಘಟಕದ ಸಭಾಂಗಣದಲ್ಲಿ ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ಶಾರದಾ ಉಮೇಶ್ ಅವರ ನೇತೃತ್ವದಲ್ಲಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಭಕ್ತಿಗೀತೆಗಳು ಹಾಗೂ ಗುರುಸ್ಮರಣೆಯೊಂದಿಗೆ ಕಾರ್ಯಕ್ರಮಕ್ಕೆ ಆಧ್ಯಾತ್ಮಿಕ ಮೆರುಗು ದೊರೆಯಿತು.

ಬಳಿಕ ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಶ್ರೀ ಭಾಸ್ಕರ್ ಸುವರ್ಣ ಅವರು ಗುರುಪೂಜೆಯನ್ನು ನೆರವೇರಿಸಿ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸರ್ವರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ ಮಹಿಳಾ ಸದಸ್ಯೆಯರನ್ನು ಪ್ರಸಾದ ನೀಡಿ ಗೌರವಿಸಲಾಯಿತು.

1001138329.jpg

ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಶ್ರೀ ವಿನೋದ್ ಮಂಚಿ ಅವರು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಹಾಗೂ ಉಪಸ್ಥಿತರಿದ್ದ ಮಾಜಿ ಅಧ್ಯಕ್ಷರು, ಸದಸ್ಯರು ಮತ್ತು ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯದರ್ಶಿ ಶ್ರೀ ವಿಕ್ಷಿತ್ ಧನ್ಯವಾದ ಸಮರ್ಪಿಸಿದರು. ಬಳಿಕ ಲಘು ಉಪಹಾರ ಮತ್ತು ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಮಾಪ್ತಿಯಾಯಿತು.