Skip to content
Billava News

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‌ನ ಕೇಂದ್ರ ಕಚೇರಿಯಲ್ಲಿ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

By Billavavani
ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮುಂಬಯಿ: ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‌ನ ಕೇಂದ್ರ ಕಚೇರಿಯಲ್ಲಿ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರು ಧ್ವಜಾರೋಹಣ ನೆರವೇರಿಸಿದರು.

1001122345.jpg

ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿರ್ದೇಶಕರಾದ ಭಾಸ್ಕರ್ ಎಂ. ಸಾಲಿಯಾನ್, ಗಂಗಾಧರ್ ಜೆ. ಪೂಜಾರಿ, ಮೋಹನ್‌ದಾಸ್ ಜಿ. ಪೂಜಾರಿ, ನಿರಂಜನ್ ಎಲ್. ಪೂಜಾರಿ, ಗಣೇಶ್ ಡಿ. ಪೂಜಾರಿ ಮತ್ತು ಮಹಾಪ್ರಬಂಧಕರಾದ ಮಹೇಶ್ ಬಿ. ಕೋಟಿಯನ್, ಜನಾರ್ಧನ ಎಂ. ಪೂಜಾರಿ ಹಾಗೂ ಚೀಫ್ ಕಂಪ್ಲೈಯನ್ಸ್ ಆಫಿಸರ್ ಶೋಭಾ ದಯಾನಂದ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಅವರೊಂದಿಗೆ ಭಾರತ್ ಬ್ಯಾಂಕ್ ಸ್ಟಾಫ್ ವೆಲ್ಫೇರ್ ಕ್ಲಬ್, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಶನ್ ಮತ್ತು ಭಾರತ್ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಂಡರು.