ಕೆಎಸ್ಇಟಿ–2026 ಪರೀಕ್ಷೆ: ಪುತ್ತೂರು ತಾಲೂಕಿನ ಅಭಿಜ್ಞಾ ಎ. ಪೂಜಾರಿ ಅವರು ರಸಾಯನಶಾಸ್ತ್ರ ವಿಷಯದಲ್ಲಿ ಉತ್ತೀರ್ಣ
ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್ಇಟಿ–2026)ರಲ್ಲಿ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಆಟೋಳಿ ನಿವಾಸಿ ಅಭಿಜ್ಞಾ ಎ. ಪೂಜಾರಿ ಅವರು ರಸಾಯನಶಾಸ್ತ್ರ ವಿಷಯದಲ್ಲಿ ಉತ್ತೀರ್ಣರಾಗಿದ್ದಾರೆ.

ಅಭಿಜ್ಞಾ ಅವರು ಅಣ್ಣಿ ಪೂಜಾರಿ ಹಾಗೂ ರೇವತಿ ದಂಪತಿಯ ಪುತ್ರಿ. ಮಂಗಳೂರು ವಿಶ್ವವಿದ್ಯಾಲಯದಿಂದ 2025ರಲ್ಲಿ ರಸಾಯನಶಾಸ್ತ್ರ ವಿಷಯದಲ್ಲಿ ಎಂ.ಎಸ್ಸಿ. ಪದವಿ ಪಡೆದಿದ್ದಾರೆ.
ಇವರು ಈ ಹಿಂದೆ ಸುಳ್ಯದ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉತ್ತರ ಕರ್ನಾಟಕದ ಪದವಿ ಪೂರ್ವ ಕಾಲೇಜೊಂದರಲ್ಲಿ ರಸಾಯನಶಾಸ್ತ್ರ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕಲೆಯಲ್ಲಿಯೂ ಆಸಕ್ತಿ ಹೊಂದಿರುವ ಅಭಿಜ್ಞಾ ಅವರು ನೃತ್ಯ ಕಲಾವಿದೆಯಾಗಿದ್ದು, ನೃತ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಅವರು 'ವಿದುಷಿ ಅಭಿಜ್ಞಾ ಪೂಜಾರಿ' ಎಂಬ ಗೌರವ ನಾಮವನ್ನು ಹೊಂದಿದ್ದಾರೆ.
ಶಿಕ್ಷಣ ಹಾಗೂ ಕಲಾ ಕ್ಷೇತ್ರ ಎರಡರಲ್ಲಿಯೂ ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಗುರುತಿಸಿಕೊಂಡಿರುವ ಅಭಿಜ್ಞಾ ಅವರ ಸಾಧನೆಗೆ ಕುಟುಂಬಸ್ಥರು, ಬಂಧುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.