Skip to content
Billava News

ಮಾಣಿ ಪರಿಸರದಲ್ಲಿ ಶೀಘ್ರದಲ್ಲೇ ಆಂಬ್ಯುಲೆನ್ಸ್ ಸೇವೆ: ಯುವವಾಹಿನಿ ಮಾಣಿ ಘಟಕದ ಮಹತ್ವದ ಹೆಜ್ಜೆ

ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆ ಇದೀಗ ಸಾಕಾರಗೊಳ್ಳುವ ಹಂತಕ್ಕೆ ಬಂದಿದೆ. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆರಂಭಿಸಲಿರುವ ಆಂಬ್ಯುಲೆನ್ಸ್ ಸೇವೆ

By Billavavani
ಮಾಣಿ ಪರಿಸರದಲ್ಲಿ ಶೀಘ್ರದಲ್ಲೇ ಆಂಬ್ಯುಲೆನ್ಸ್ ಸೇವೆ: ಯುವವಾಹಿನಿ ಮಾಣಿ ಘಟಕದ ಮಹತ್ವದ ಹೆಜ್ಜೆ

ಮಾಣಿ: ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆ ಇದೀಗ ಸಾಕಾರಗೊಳ್ಳುವ ಹಂತಕ್ಕೆ ಬಂದಿದೆ. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆರಂಭಿಸಲಿರುವ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ನಿನ್ನೆ ನಡೆದ ‘ಆಟಿ ಸಿರಿ ಸಂಭ್ರಮ–2026’ ಕಾರ್ಯಕ್ರಮದ ವೇದಿಕೆಯಲ್ಲಿ ನೆರವೇರಿತು.

ಆರೋಗ್ಯ ಸೇವೆಯ ಅಗತ್ಯವಿರುವ ಸಂದರ್ಭದಲ್ಲಿ ತುರ್ತು ನೆರವು ಒದಗಿಸುವ ಉದ್ದೇಶದಿಂದ ಈ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಮಾಣಿ ಹಾಗೂ ಸುತ್ತಮುತ್ತಲಿನ ಪರಿಸರದ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವ ನಿರೀಕ್ಷೆಯಿದೆ.

‘ಸೇವಾ ಸ್ಪರ್ಶ – ಆಂಬ್ಯುಲೆನ್ಸ್ ಸೇವೆ’ ಎಂಬ ಆಶಯದೊಂದಿಗೆ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವ ಯುವವಾಹಿನಿ ಮಾಣಿ ಘಟಕದ ಈ ಪ್ರಯತ್ನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ.

2.jpeg

ಈ ಮಹತ್ವದ ಸಮಾಜಮುಖಿ ಕಾರ್ಯವನ್ನು ಯಶಸ್ವಿಯಾಗಿ ಸಾಕಾರಗೊಳಿಸುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿ ಸಮಾಜಕ್ಕೆ ಉತ್ತಮ ರೀತಿಯಲ್ಲಿ ಅರ್ಪಿಸಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಅತ್ಯಮೂಲ್ಯವಾಗಿದೆ ಎಂದು ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸೇವೆಯ ಕ್ಷೇತ್ರದಲ್ಲಿ ಜನಪರ ಕಾಳಜಿಯೊಂದಿಗೆ ಯುವವಾಹಿನಿ ಮಾಣಿ ಘಟಕ ಕೈಗೊಂಡಿರುವ ಈ ಕಾರ್ಯವು ಪರಿಸರದ ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.