ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕ ಗೆದ್ದು ಮಂಗಳೂರಿಗೆ ಕೀರ್ತಿ ತಂದ ಎಎಸ್‌ಐ ಗಿರೀಶ್ ಸುವರ್ಣ ಅವರಿಗೆ ಕುದ್ರೋಳಿ ಕ್ಷೇತ್ರದಲ್ಲಿ ಗೌರವ
ಮಂಗಳೂರು: ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್-2026ರಲ್ಲಿ ಎರಡು ಪದಕಗಳನ್ನು ಗೆದ್ದು ಮಂಗಳೂರಿಗೆ ಹೆಮ್ಮೆ ತಂದಿರುವ ಎಎಸ್‌ಐ ಗಿರೀಶ್ ಸುವರ್ಣ ಅವರನ್ನು ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಮಂಗಳೂರು: ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್-2026ರಲ್ಲಿ ಎರಡು ಪದಕಗಳನ್ನು ಗೆದ್ದು ಮಂಗಳೂರಿಗೆ ಹೆಮ್ಮೆ ತಂದಿರುವ ಎಎಸ್‌ಐ ಗಿರೀಶ್ ಸುವರ್ಣ ಅವರನ್ನು ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ಅಕ್ಟೋಬರ್ 4ರಿಂದ 11ರವರೆಗೆ ನಡೆದ ಈ ಚಾಂಪಿಯನ್‌ಶಿಪ್‌ನಲ್ಲಿ ವಿವಿಧ ವಯೋಮಾನದ ಮಾಸ್ಟರ್ಸ್ ಈಜುಪಟುಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಪುರುಷರ ಹಾಗೂ ಮಹಿಳೆಯರ ವಿಭಾಗಗಳಲ್ಲಿ ಭಾರತೀಯ ಈಜುಪಟುಗಳು ಗಮನಾರ್ಹ ಸಾಧನೆ ತೋರಿದರೆ, ಶ್ರೀಲಂಕಾ, ಓಮನ್, ಇರಾನ್ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಅಂತಾರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಗಿರೀಶ್ ಸುವರ್ಣ ಅವರು ಮಂಗಳೂರಿನ ಕ್ರೀಡಾ ಕ್ಷೇತ್ರಕ್ಕೆ ಗೌರವ ತಂದಿದ್ದಾರೆ. ಅವರ ಈ ಸಾಧನೆಗೆ ಕುದ್ರೋಳಿ ಕ್ಷೇತ್ರದಲ್ಲಿ ಗೌರವ ಸಲ್ಲಿಸಲಾಯಿತು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಗಿರೀಶ್ ಸುವರ್ಣ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ಅವರ ಮುಂದಿನ ಕ್ರೀಡಾ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸಲಾಗಿದೆ.
