ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ವೀರಯೋಧರಿಗೆ ಸನ್ಮಾನ, ಆಟಿದ ಪೊಲಬು ಕಾರ್ಯಕ್ರಮ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧ, ಪಡೀಲ್‌ನಲ್ಲಿ ಆಟಿ ತಿಂಗಳ ವಿಶೇಷ ‘ಆಟಿದ ಪೊಲಬು’ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶ ಸೇವೆಗೈದ ವೀರಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧ, ಪಡೀಲ್‌ನಲ್ಲಿ ಆಟಿ ತಿಂಗಳ ವಿಶೇಷ ‘ಆಟಿದ ಪೊಲಬು’ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶ ಸೇವೆಗೈದ ವೀರಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ವಂದೇ ಮಾತರಂ ಗೀತೆ ಹಾಡಲಾಯಿತು. ಇದೇ ವೇಳೆ ವೀರಯೋಧ ರಾಜೇಶ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ರಾಜೇಶ್ ಅವರು ಕೃತಜ್ಞತೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಹಾಗೂ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ರಾಜೇಶ್ ಅವರ ದೇಶಸೇವೆಯನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯರಾದ ಉಮಾನಾಥ ಕೋಟೆಕಾರ್ ಅವರು ಸ್ವಚ್ಛತೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಬಳಿಕ ‘ಆಟಿದ ಪೊಲಬು’ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು. ತೆಂಗಿನ ಕೊಂಬನ್ನು ಅರಳಿಸುವ ಮೂಲಕ ಕೆನರಾ ಕಾಲೇಜಿನ ಶಿಕ್ಷಕಿ ತಾರಾ ಪಿ. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಣ್ಯರು ದೀಪ ಪ್ರಜ್ವಲಿಸಿದರು. ಈ ಸಂದರ್ಭ ತಾರಾ ಅವರು ಆಟಿ ತಿಂಗಳ ವೈಶಿಷ್ಟ್ಯ ಹಾಗೂ ಅದರ ಸಾಂಪ್ರದಾಯಿಕ ಮಹತ್ವದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಹಾಗೂ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, “ಇಂದಿನ ದಿನಗಳಲ್ಲಿ ನಾಟಿ ವೈದ್ಯಕೀಯ ಪದ್ಧತಿ ಮರೆಯಾಗುತ್ತಿರುವ ಸಂದರ್ಭದಲ್ಲಿ, ಇಂದಿಗೂ ಔಷಧ ನೀಡುತ್ತಾ ಜನಸೇವೆ ಮಾಡುತ್ತಿರುವ ಹಿರಿಯ ನಾಟಿ ವೈದ್ಯೆ ಕಲ್ಲೇಗ ಕಮಲಾ ಅವರ ಸೇವೆ ನಿಜಕ್ಕೂ ಶ್ಲಾಘನೀಯ. ಆಟಿಕೂಟದಂತಹ ಕಾರ್ಯಕ್ರಮದಲ್ಲಿ ನಾವೆಲ್ಲರೂ ಒಂದಾಗಿ ಭಾಗವಹಿಸುವುದು ಸಂತಸದ ವಿಚಾರ” ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ನಾಟಿ ವೈದ್ಯೆ ಕಲ್ಲೇಗ ಕಮಲಾ ಕೆ. ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಸೇರಿದಂತೆ ಗಣ್ಯರು, ಸಿಬ್ಬಂದಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಆಟಿ ತಿಂಗಳ ವಿಶೇಷ ಸಾಂಪ್ರದಾಯಿಕ ತಿಂಡಿತಿನಸುಗಳ ಊಟದ ವ್ಯವಸ್ಥೆ ಮಾಡಲಾಗಿತ್ತು.
