Skip to content
Billava News

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ ಆಚರಣೆ

ಚಿತ್ರ ವರದಿ- ಉಮೇಶ್ ಕೆ. ಅಂಚನ್

By Billavavani
ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ ಆಚರಣೆ

ಮುಂಬೈ, ಜುಲೈ 30: ಬಿಲ್ಲವರ ಅಸೋಸಿಯೇಶನ್‌ನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಜುಲೈ 29ರಂದು ಗುರುಪೂರ್ಣಿಮೆ ಉತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಹಿರಿಯರಾದ ಕೆ.ಎಲ್. ಅಂಚನ್ ದಂಪತಿಗಳು ಅಲಂಕೃತ ಗುರುದೇವರ ಭಾವಚಿತ್ರಕ್ಕೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಸ್ಥಳೀಯ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಗಮಿಸಿದ್ದ ಭಕ್ತರು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಿಮಯ ವಾತಾವರಣ ನಿರ್ಮಿಸಿದರು. ಭಜನಾ ಸೇವೆಯಲ್ಲಿ ಜತೀಶ್ ಕುಂದರ್ ಹಾರ್ಮೋನಿಯಂ ಹಾಗೂ ಅಶೋಕ್ ಟಿ. ಪೂಜಾರಿ ತಬಲಾ ವಾದನದ ಮೂಲಕ ಸಹಕರಿಸಿದರು.

ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿಮಹಾತ್ಮಾ ಪೂಜಾ ಸಮಿತಿಯ ಪ್ರಧಾನ ಅರ್ಚಕರಾದ ಸತೀಶ್ ಕೋಟ್ಯಾನ್ ಅವರ ಪೌರೋಹಿತ್ಯದಲ್ಲಿ ಗುರುಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಮಹಾಮಂಗಳಾರತಿ ನೆರವೇರಿತು. ಈ ಸಂದರ್ಭದಲ್ಲಿ ಅವರು ಗುರುಪೂರ್ಣಿಮೆಯ ಮಹತ್ವ ಮತ್ತು ಆಧ್ಯಾತ್ಮಿಕ ವಿಶೇಷತೆಯ ಕುರಿತು ಭಕ್ತಾದಿಗಳಿಗೆ ವಿವರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಸಮಿತಿಯ ಭುವಾಜಿ ರಾಕೇಶ್ ಅಮೀನ್ ಹಾಗೂ ಶ್ರೀನಿವಾಸ್ ಗುರುಸ್ವಾಮಿ ಅವರು ಸಹಕರಿಸಿದರು.

ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷರಾದ ಶೇಖರ್ ರಾಮ ಪೂಜಾರಿ ಅವರು ಕಾರ್ಯಕ್ರಮಕ್ಕೆ ದೇಣಿಗೆ ನೀಡಿದ ದಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗುರುಪೂಜೆಯ ಸೇವೆ ಸಲ್ಲಿಸಿದ ಗುರುಭಕ್ತರನ್ನು ಪ್ರಸಾದ ನೀಡಿ ಗೌರವಿಸಿದರು.

ಸಭೆಯನ್ನು ಉದ್ದೇಶಿಸಿ ಕಾರ್ಯದರ್ಶಿ ಜ್ಯೋತಿ ರತ್ನಾಕರ್ ಪೂಜಾರಿ ಅವರು ಗುರುಭಕ್ತರನ್ನು ಆತ್ಮೀಯವಾಗಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಅವರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಮಿತಿಯ ಪದಾಧಿಕಾರಿಗಳಾದ ಚಿತ್ರಾಪು ಕೆ.ಎಂ. ಕೋಟ್ಯಾನ್, ಸುಧಾಕರ್ ಜಿ. ಪೂಜಾರಿ, ಸತೀಶ್ ಪೂಜಾರಿ, ಸಂತೋಷ್ ಕರ್ಕೇರ, ಹರೀಶ್ ಸಾಲಿಯಾನ್ ಪಲಿಮಾರು, ದೀಪಕ್ ಕರ್ಕೇರ, ಸದಾಶಿವ ಪೂಜಾರಿ, ವಿಜಯ ಅಂಚನ್, ಕಿಶೋರ್ ಅಮೀನ್, ಜಯಶ್ರೀ ಸಂತೋಷ್ ಕರ್ಕೇರ, ನಾಗೇಶ್ ಪೂಜಾರಿ, ವಿಠಲ್ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಧಾರ್ಮಿಕ ಕಾರ್ಯಕ್ರಮಗಳ ಸಮಾಪ್ತಿಯ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು.