ಬಿಲ್ಲವ ಅಸೋಸಿಯೇಷನ್ ಬೆಂಗಳೂರು: ಗುರು ಜಯಂತಿ, ಸನ್ಮಾನ
ಬಿಲ್ಲವ ಅಸೋಸಿಯೇಷನ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.

ಮಂಗಳೂರು: ಬಿಲ್ಲವ ಅಸೋಸಿಯೇಷನ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನದ ಅಧ್ಯಕ್ಷ, ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಿದರು. ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಸಂಘದ ಅಧ್ಯಕ್ಷ ಎಂ. ವೇದಕುಮಾರ್, ಕರ್ನಾಟಕ ಸರಕಾರದ ಅಡಿಷನಲ್ ಅಡ್ವೊಕೇಟ್ ಜನರಲ್ ತಾರಾನಾಥ್ ಪೂಜಾರಿ ಮಾತನಾಡಿದರು. ಎಸ್ಸೆಸ್ಸೆಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದ ಪ್ರತಿಭಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಂಘದ ಗೌರವಾಧ್ಯಕ್ಷ ಎಂ. ರಮೇಶ್ ಬಂಗೇರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷ ಜಲಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜತೆ ಕಾರ್ಯದರ್ಶಿ ಎಂ.ಕೆ. ದಾಮೋದರ್ ಸಮನ್ವಯ, ಸಂಘಟನಾ ಕಾರ್ಯದರ್ಶಿ ಜೈ. ನಾರಾಯಣ ಪೂಜಾರಿ, ವಿದ್ಯಾರ್ಥಿಗಳ ಸಮಿತಿ ಅಧ್ಯಕ್ಷ ನಾಗೇಶ್, ಸಹ-ಅಧ್ಯಕ್ಷ ಗಂಗಾಧರ ಎಸ್. ಪೂಜಾರಿ, ಉಪಾಧ್ಯಕ್ಷ ದೇವಪ್ಪಸಾದ್ ಬಿ. ಪೂಜಾ ಸಮಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಬಂಗೇರ ಉಪಸ್ಥಿತರಿದ್ದರು.
ಪವಿತ್ರ ಪ್ರಶಾಂತ್ ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ ವಂದಿಸಿದರು.
