Skip to content
Billava News

ಬಿಲ್ಲವ ಬ್ರಿಗೇಡ್‌ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ

By Billavavani
ಬಿಲ್ಲವ ಬ್ರಿಗೇಡ್‌ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಬಂಟ್ವಾಳ: ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ ಆರೋಪದ ಹಿನ್ನೆಲೆಯಲ್ಲಿ, ಬಿಲ್ಲವ ಬ್ರಿಗೇಡ್‌ ಬಂಟ್ವಾಳ ಸಂಘಟನೆಯು ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ.

ದೂರಿನ ಪ್ರಕಾರ, ಹರ್ಷ ಕೆ. ಶೆಟ್ಟಿ ಎಂಬಾತ ಯಾವುದೇ ಅಧಿಕೃತ ಮಾಹಿತಿ ಅಥವಾ ತನಿಖಾ ವರದಿಯ ಆಧಾರವಿಲ್ಲದೆ, ಪ್ರಕರಣದ ಆರೋಪಿಯನ್ನು ಬಿಲ್ಲವ ಸಮುದಾಯಕ್ಕೆ ಸೇರಿದವನು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರನ್ನು ದಿಕ್ಕು ತಪ್ಪಿಸುವ ಹಾಗೂ ಜಾತಿ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ರೀತಿಯ ಸುಳ್ಳು ಮತ್ತು ದ್ವೇಷಪೂರಿತ ಸಂದೇಶಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಲ್ಲವ ಬ್ರಿಗೇಡ್‌ ಬಂಟ್ವಾಳ ಮನವಿ ಮಾಡಿದೆ.