ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.), ಕಾಶಿಪಟ್ಣ: ಅ.11ರಂದು ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ
ಕಾಶಿಪಟ್ಣ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.), ಕಾಶಿಪಟ್ಣ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆಯು ಅಕ್ಟೋಬರ್ 11ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾಶಿಪಟ್ಣ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.), ಕಾಶಿಪಟ್ಣ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆಯು ಅಕ್ಟೋಬರ್ 11ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜಯಂತಿ ಆಚರಣೆಯ ಅಂಗವಾಗಿ ಬೆಳಗ್ಗೆ 10 ಗಂಟೆಗೆ ಗಣಹೋಮ, 11 ಗಂಟೆಗೆ ಗುರುಪೂಜೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಲಿದೆ. ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಶ್ರೀ ಪ್ರವೀಣ್ ಶಾಂತಿಯವರ ಪೌರೋಹಿತ್ಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ಮಿತ್ತೊಟು ಗುತ್ತು ಪಿ.ಕೆ. ರಾಜು ಪೂಜಾರಿ, ಸಂಘದ ಕಾರ್ಯದರ್ಶಿ ಸತೀಶ್ ಕೆ., ವಸಂತ ಕೋಟ್ಯಾನ್ ಪುತ್ತಿಲ ಬರ್ಕೆ, ನಾರಾಯಣ ಸಾಲ್ಯಾನ್ ಸೇರಿದಂತೆ ಗಣ್ಯರು ಉಪಸ್ಥಿತರಿರುವರು.

ಜಯಂತಿ ಆಚರಣೆಯಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
“ವಿದ್ಯೆಯಿಂದ ಸ್ವತಂತ್ರರಾಗಿ – ಸಂಘಟನೆಯಿಂದ ಬಲಯುತರಾಗಿ”