Skip to content
Billava News

ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು, ಮಕ್ಕಳ ಪ್ರತಿಭಾ ಅನಾವರಣ ಸ್ಪರ್ಧೆ

ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ಇದರ ವತಿಯಿಂದ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಅನಾವರಣ ಸ್ಪರ್ಧೆ ಕಾರ್ಯಕ್ರಮವು ಆ. 9ರಂದು ನಡೆಯಿತು.

By Billavavani
ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು, ಮಕ್ಕಳ ಪ್ರತಿಭಾ ಅನಾವರಣ ಸ್ಪರ್ಧೆ

ಬಜಪೆ, ಆ. 9: ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ಇದರ ವತಿಯಿಂದ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಅನಾವರಣ ಸ್ಪರ್ಧೆ ಕಾರ್ಯಕ್ರಮವು ಆ. 9ರಂದು ನಡೆಯಿತು.

ಒಂದನೇ ತರಗತಿಯಿಂದ ಪದವೀಧರರ ವರೆಗಿನ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಸಂಗೀತ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಹಾಗೂ ಒಳಾಂಗಣ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಂಘದ ಅಧ್ಯಕ್ಷರಾದ ಶಿವರಾಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

6666.jpeg

ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಸಂಘದ ಪದಾಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿತ್ತು. ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿದ ಪರಿಣಾಮ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

3333.jpeg

ಸುಮಾರು 70 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರದೊಂದಿಗೆ ಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಪುಸ್ತಕವನ್ನು ನೀಡಲಾಯಿತು.

1222.jpeg

ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಆಗಸ್ಟ್ 28ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

22.jpeg

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರವಾಯಿತು.