ಬೈಂದೂರು ಚಾತುರ್ಮಾಸ್ಯ ವ್ರತಚಾರಣೆ: ಸಮಾರೋಪದತ್ತ ಐತಿಹಾಸಿಕ ಧಾರ್ಮಿಕ ಮಹೋತ್ಸವ
ಬೈಂದೂರು: ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಚಾರಣೆಯು ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ವೈಭವದೊಂದಿಗೆ ಸಮಾರೋಪದತ್ತ ಸಾಗುತ್ತಿದೆ.

ಬೈಂದೂರು: ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಚಾರಣೆಯು ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ವೈಭವದೊಂದಿಗೆ ಸಮಾರೋಪದತ್ತ ಸಾಗುತ್ತಿದೆ.
ಹಿಂದೂ ಸಮಾಜದಲ್ಲಿ ಇಂತಹ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಬೇಕೆಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ಕಾರ್ಯಕ್ರಮವನ್ನು ಆಯೋಜಿಸಿರುವ ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಅಭಿನಂದಿಸಿದ್ದಾರೆ.

ಗಣ್ಯರ ಭೇಟಿ, ಶ್ರೀಗಳ ಆಶೀರ್ವಾದ
ಚಾತುರ್ಮಾಸ್ಯ ವ್ರತದ ಮಹತ್ವ ಹಾಗೂ ಶ್ರೀಗಳ ದರ್ಶನ ಪಡೆಯುವ ಉದ್ದೇಶದಿಂದ ರಾಜ್ಯದ ವಿವಿಧ ಭಾಗಗಳಿಂದ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸಾಮಾಜಿಕ ಮುಖಂಡರು ಸೇರಿದಂತೆ ಸಾವಿರಾರು ಭಕ್ತರು ಬೈಂದೂರಿಗೆ ಆಗಮಿಸುತ್ತಿದ್ದಾರೆ. ಭಕ್ತರು ಶ್ರೀಗಳ ದಿವ್ಯ ಆಶೀರ್ವಾದ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಸೆಪ್ಟೆಂಬರ್ 6ರಂದು ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾದ ಮಾಂಕಾಳ್ ವೈದ್ಯ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಸೂರಜ್ ಸೋನಿ, ಎಚ್.ಆರ್. ನಾಯಕ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.



ಸೆಪ್ಟೆಂಬರ್ 14ರಂದು ಸೀಮೋಲ್ಲಂಘನದೊಂದಿಗೆ ಸಮಾರೋಪ
ಒಟ್ಟು 48 ದಿನಗಳ ಈ ಮಹಾವ್ರತವು ಇದೀಗ ಅಂತಿಮ ಹಂತ ತಲುಪಿದ್ದು, ಸಮಾರೋಪಕ್ಕೆ ಇನ್ನೇನು ಒಂದು ವಾರ ಮಾತ್ರ ಬಾಕಿಯಿದೆ. ಇದೇ ಸೆಪ್ಟೆಂಬರ್ 14ರಂದು ಸೀಮೋಲ್ಲಂಘನದೊಂದಿಗೆ ಶ್ರೀಗಳ ಚಾತುರ್ಮಾಸ್ಯ ವ್ರತಚಾರಣೆಯು ಸಂಪನ್ನಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಸಮಾರೋಪದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಸ್ತ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪರಮಪೂಜ್ಯ ಶ್ರೀಗಳ ದರ್ಶನ ಪಡೆದು ಆಶೀರ್ವಾದಕ್ಕೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಬೈಂದೂರಿನಲ್ಲಿ ನಡೆಯುತ್ತಿರುವ ಈ ಐತಿಹಾಸಿಕ ಧಾರ್ಮಿಕ ಮಹೋತ್ಸವವು ಭಕ್ತಿ, ಆಧ್ಯಾತ್ಮ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರುತ್ತಿದ್ದು, ಸಮಾರೋಪದ ದಿನ ಭಕ್ತರ ಹೆಚ್ಚಿನ ಉಪಸ್ಥಿತಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.


