ಕಡೆಕಾರು ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಚಂದ್ರಕಾಂತ್ ಕಿದಿಯೂರು ಆಯ್ಕೆ
ಕಡೆಕಾರು ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ನೂತನ ಅಧ್ಯಕ್ಷರಾಗಿ ಚಂದ್ರಕಾಂತ್ ಕಿದಿಯೂರು ಆಯ್ಕೆಯಾಗಿದ್ದಾರೆ.
By Billavavani

ಕಿದಿಯೂರು: ಕಡೆಕಾರು ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ನೂತನ ಅಧ್ಯಕ್ಷರಾಗಿ ಚಂದ್ರಕಾಂತ್ ಕಿದಿಯೂರು ಆಯ್ಕೆಯಾಗಿದ್ದಾರೆ.
ಮಂಡಳಿಯ ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಜಯಶೀಲ ಕಿದಿಯೂರು ಹಾಗೂ ಧರ್ಮಪಾಲ್ ಕಡೆಕಾರು, ಉಪಾಧ್ಯಕ್ಷರಾಗಿ ಚಂದ್ರಕಾಂತ ಎಸ್., ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಟಿ.ಆರ್. ಕಿದಿಯೂರು, ಕಾರ್ಯದರ್ಶಿಯಾಗಿ ಆಕಾಶ್ ಪೂಜಾರಿ, ಕೋಶಾಧಿಕಾರಿಯಾಗಿ ಮಹೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ಅವಿನಾಶ್ ಕಡೆಕಾರು ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜಯ ಕಿದಿಯೂರು ನೇಮಕಗೊಂಡಿದ್ದಾರೆ.
ನೂತನ ಸಮಿತಿಯು ಯಕ್ಷಗಾನ ಕಲೆಯ ಸಂರಕ್ಷಣೆ, ಕಲಾವಿದರ ಪ್ರೋತ್ಸಾಹ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ವಿಸ್ತರಣೆಗೆ ಆದ್ಯತೆ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದು, ಮಂಡಳಿಯ ಮುಂದಿನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಕೋರಿದೆ.
