ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಸುವರ್ಣ ಆಯ್ಕೆ
ಪ್ರತಿಷ್ಠಿತ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ 2026–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಸುವರ್ಣ ಆಯ್ಕೆಯಾಗಿದ್ದಾರೆ.

ಮುಲ್ಕಿ: ಪ್ರತಿಷ್ಠಿತ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ 2026–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಸುವರ್ಣ ಆಯ್ಕೆಯಾಗಿದ್ದಾರೆ.
ಚಂದ್ರಶೇಖರ ಸುವರ್ಣ ಅವರು ಬಪ್ಪನಾಡು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮುಲ್ಕಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಯುವವಾಹಿನಿ ಕೇಂದ್ರೀಯ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಮೂರ್ತೇದಾರ ಸೇವಾ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಂಘದ ನೂತನ ಉಪಾಧ್ಯಕ್ಷರಾಗಿ ಸತೀಶ್ ಅಂಚನ್ ಹಾಗೂ ಇಂದಿರಾ ಸಿ. ಅಮೀನ್ ಕೊಲ್ಲೂರು, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ವಿ. ಅಂಚನ್, ಜೊತೆ ಕಾರ್ಯದರ್ಶಿಗಳಾಗಿ ಜಯಸಿ ಪೂಜಾರಿ ಮಾನಂಪಾಡಿ ಹಾಗೂ ನರೇಂದ್ರ ಕೆರೆಕಾಡು, ಕೋಶಾಧಿಕಾರಿಯಾಗಿ ಹರೀಂದ್ರ ಸುವರ್ಣ ಮತ್ತು ಜೊತೆ ಕೋಶಾಧಿಕಾರಿಯಾಗಿ ಸತೀಶ್ ಮಾನಂಪಾಡಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಸೀಮೆಯ ಅರಸ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಬಪ್ಪನಾಡು ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಯದು ನಾರಾಯಣ ಶೆಟ್ಟಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಪದಾಧಿಕಾರಿಗಳಾದ ಸುನಿಲ್ ಆಳ್ವ, ಅತುಲ್ ಕುಡ್ವ, ಕೆಪಿಸಿಸಿ ಕೋ-ಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಗೋಪಿನಾಥ ಪಡಂಗ ಹಾಗೂ ಡಾ. ಹರಿಶ್ಚಂದ್ರ ಪಿ. ಸಾಲ್ಯಾನ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ವಿಜಯಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಉಮೇಶ್ ಮಾನಂಪಾಡಿ, ಉದಯ ಕುಮಾರ್ ಶೆಟ್ಟಿ ಅಧಿಧನ್, ವಾಸು ಪೂಜಾರಿ ಚಿತ್ರಾಪು, ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್ ಸೇರಿದಂತೆ ಮತ್ತಿತರರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಶುಭ ಹಾರೈಸಿದ್ದಾರೆ.
