Skip to content
Billava News

ಮನೆಯಲ್ಲೇ ಸ್ವಚ್ಛತೆಯ ಅಭ್ಯಾಸ ಬೆಳೆಸಿದರೆ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ: ರಂಜನ್ ಬೆಳ್ಳಿಪಾಡಿ

ಬಜಪೆ: ಸ್ವಚ್ಛ ಹಾಗೂ ಹಸಿರು ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮ ಮನೆಯಿಂದಲೇ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ರಂಜನ್ ಬೆಳ್ಳಿಪಾಡಿ ಹೇಳಿದರು.

By Billavavani
ಮನೆಯಲ್ಲೇ ಸ್ವಚ್ಛತೆಯ ಅಭ್ಯಾಸ ಬೆಳೆಸಿದರೆ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ: ರಂಜನ್ ಬೆಳ್ಳಿಪಾಡಿ

ಬಜಪೆ: ಸ್ವಚ್ಛ ಹಾಗೂ ಹಸಿರು ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮ ಮನೆಯಿಂದಲೇ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ರಂಜನ್ ಬೆಳ್ಳಿಪಾಡಿ ಹೇಳಿದರು.

1001172796.jpg

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ವತಿಯಿಂದ ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಸಹಯೋಗದಲ್ಲಿ ರಾಮಕೃಷ್ಣ ಮಿಷನ್ ಮಂಗಳೂರು ಪ್ರತಿನಿಧಿಗಳಿಂದ ಆಯೋಜಿಸಲಾದ ಮಹಿಳೆಯರಿಗಾಗಿ ಪರಿಸರ ಹಾನಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1001172795.jpg

ಸೆ. 26ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಜನ್ ಬೆಳ್ಳಿಪಾಡಿ ಅವರು ದೈನಂದಿನ ಬದುಕಿನಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯತೆ, ಅಡುಗೆ ಮನೆಯ ತ್ಯಾಜ್ಯ ನಿರ್ವಹಣೆ ಹಾಗೂ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಮನೆ ಹಾಗೂ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಸ್ವಚ್ಛ ಮತ್ತು ಹಸಿರು ಸಮಾಜ ನಿರ್ಮಾಣದತ್ತ ಇಡುವ ಅರ್ಥಪೂರ್ಣ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದರು.

MRPLನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ವಿಭಾಗದ ಪ್ರಬಂಧಕ ಕೇಶವ ಪಟಾಲಿ ಅವರು ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಮಾರ್ಗದರ್ಶನ ನೀಡಿದರು.

1001172809.jpg

ಕಾರ್ಯಕ್ರಮದಲ್ಲಿ 75ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲರಿಗೂ ಜ್ಯೂಟ್ ಬ್ಯಾಗ್‌ಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

1001172802.jpg

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಬಜಪೆಯ ಅಧ್ಯಕ್ಷ ಶಿವರಾಮ ಪೂಜಾರಿ, ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ ಹಾಗೂ ಪಟ್ಟಣ ಪಂಚಾಯತ್ ಕೌನ್ಸಿಲರ್ ಪದ್ಮನಾಭ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

1001172801.jpg

ಚಂದ್ರಶೇಖರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಜಗನ್ನಾಥ್ ಪ್ರಾರ್ಥಿಸಿದರು. ರೋಹಿತ್ ಪೂಜಾರಿ ಸ್ವಾಗತಿಸಿದರು. ಸುಚಿತ ದೇವರಾಜ್ ವಂದಿಸಿದರು.