ಬಿ.ಸಿ.ರೋಡ್‌ನಲ್ಲಿ ಹತ್ಯೆಗೀಡಾದ ಯುವತಿ ಲಾವಣ್ಯ ಅವರ ಮನೆಗೆ ದ. ಕ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ಭೇಟಿ; ಕುಟುಂಬಕ್ಕೆ ಸಾಂತ್ವನ
ಬಿ.ಸಿ.ರೋಡ್ ಬಸ್ ನಿಲ್ದಾಣದ ಸಮೀಪ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಕಕ್ಯಪದವು ನಿವಾಸಿ ಲಾವಣ್ಯ ಅವರ ಮನೆಗೆ ಕಾಂಗ್ರೆಸ್ ಮುಖಂಡ ಪದ್ಮರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
By Billavavani

ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದ ಸಮೀಪ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಕಕ್ಯಪದವು ನಿವಾಸಿ ಲಾವಣ್ಯ ಅವರ ಮನೆಗೆ ಕಾಂಗ್ರೆಸ್ ಮುಖಂಡ ಪದ್ಮರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಕಕ್ಯಪದವಿನ ಬಾಲಪ್ಪ ಗೌಡ ಅವರ ಪುತ್ರಿ ಲಾವಣ್ಯ ಅವರ ಹತ್ಯೆ ಪ್ರಕರಣದ ಸುದ್ದಿ ತಿಳಿದು, ಪದ್ಮರಾಜ್ ಅವರು ಕುಟುಂಬವನ್ನು ಭೇಟಿ ಮಾಡಿ ದುಃಖ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಇಂತಹ ಕ್ರೂರ ಕೃತ್ಯಗಳು ಮನುಕುಲವೇ ತಲೆತಗ್ಗಿಸುವಂತೆ ಮಾಡುತ್ತವೆ. ಅತ್ಯಂತ ಎಳೆಯ ಪ್ರಾಯದವರೇ ಇಂತಹ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳಲ್ಲಿ ತೊಡಗುತ್ತಿರುವುದು ನಮ್ಮ ಸಮಾಜದ ಸ್ಥಿತಿ ಎಷ್ಟು ಆಘಾತಕಾರಿ ಬೆಳವಣಿಗೆ ಎಂದು ಹೇಳಿದರು.
