ಬ್ರಿಟನ್ ಬಿಲ್ಲವ ಬಳಗ ಯುಕೆ ಸಂಸ್ಥಾಪಕ ಅಧ್ಯಕ್ಷ ಡಾ. ಮನೋಜ್ ಪೂಜಾರಿ ಅವರಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿ ಅನ್ನಛತ್ರ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ
ಮಂಗಳೂರು: ಬ್ರಿಟನ್ ಬಿಲ್ಲವ ಬಳಗ ಯುಕೆ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಮನೋಜ್ ಪೂಜಾರಿ ಅವರು ಕುಟುಂಬ ಸಮೇತರಾಗಿ ಭಾರತ ಪ್ರವಾಸದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.

ಮಂಗಳೂರು: ಬ್ರಿಟನ್ ಬಿಲ್ಲವ ಬಳಗ ಯುಕೆ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಮನೋಜ್ ಪೂಜಾರಿ ಅವರು ಕುಟುಂಬ ಸಮೇತರಾಗಿ ಭಾರತ ಪ್ರವಾಸದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷರಾದ ಶ್ರೀ ರವಿ ಪೂಜಾರಿ ಚಿಲಿಂಬಿ ಅವರು ಡಾ. ಮನೋಜ್ ಪೂಜಾರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಶ್ರೀ ಕ್ಷೇತ್ರದ ಶಕ್ತಿ ಸಾನಿಧ್ಯದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದರು.
ಶ್ರೀ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಯುರ್ವೇದಿಕ್ ಕೇಂದ್ರ ಹಾಗೂ ಯಾತ್ರಿ ನಿವಾಸದ ಕಾಮಗಾರಿಗಳನ್ನು ವೀಕ್ಷಿಸಿದ ಡಾ. ಮನೋಜ್ ಪೂಜಾರಿ ಅವರು ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ಶ್ರೀ ಕ್ಷೇತ್ರದ ದೇಯಿ ಬೈದೆತಿ ಸತ್ಯ ಧರ್ಮ ಚಾವಡಿಯ ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ಅನ್ನಛತ್ರದ ಪುಣ್ಯ ಕಾರ್ಯಕ್ಕೆ ಸುಮಾರು ₹1 ಲಕ್ಷವನ್ನು ಸೇವಾ ರೂಪದಲ್ಲಿ ದೇಣಿಗೆಯಾಗಿ ನೀಡಿದರು.
ಡಾ. ಮನೋಜ್ ಪೂಜಾರಿ ಅವರು ಯಶಸ್ವಿ ವೈದ್ಯಕೀಯ ವೃತ್ತಿಯ ಜೊತೆಗೆ ಬ್ರಿಟನ್ ಬಿಲ್ಲವ ಬಳಗ ಯುಕೆ ಮೂಲಕ ಬಿಲ್ಲವ ಸಮುದಾಯವನ್ನು ಒಗ್ಗೂಡಿಸುವುದು, ಸಮುದಾಯದ ಅಭಿವೃದ್ಧಿಗೆ ಬೆಂಬಲ ನೀಡುವುದು ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಹಾಗೂ ಅನ್ನಛತ್ರ ನಿರ್ಮಾಣದಂತಹ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ ವಿದೇಶದಲ್ಲಿದ್ದುಕೊಂಡೂ ಡಾ. ಮನೋಜ್ ಪೂಜಾರಿ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ.
