Skip to content
Trending Topic

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ; ಹಲವರು ಗಾಯ

ಕಾರ್ಕಳದಿಂದ ಮೂಡಬಿದ್ರೆಯತ್ತ ತೆರಳುತ್ತಿದ್ದ ಬಸ್‌ವೊಂದು ಸಾಣೂರು ಜಂಕ್ಷನ್‌ ಬಳಿ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

By Billavavani
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ; ಹಲವರು ಗಾಯ

ಕಾರ್ಕಳ–ಮೂಡಬಿದ್ರೆ ಹೆದ್ದಾರಿಯಲ್ಲಿ ಸಂಭವಿಸಿದ ಗಂಭೀರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ, ಸವಿತಾ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಮೂಡಬಿದ್ರೆಯತ್ತ ತೆರಳುತ್ತಿದ್ದ ಬಸ್‌ವೊಂದು ಸಾಣೂರು ಜಂಕ್ಷನ್‌ ಬಳಿ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಸ್ಥಳೀಯ ನಿವಾಸಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ರಮಾನಾಥ ರೈ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಬಸ್ ಹಾಗೂ ಕಾರಿನಲ್ಲಿದ್ದ ಹಲವು ಪ್ರಯಾಣಿಕರೂ ಅಪಘಾತದಲ್ಲಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.