Skip to content
Billava News

ಕಲ್ವಾ: ಬಿಲ್ಲವರ ಅಸೋಸಿಯೇಷನ್ ಸ್ಥಳೀಯ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಗುರು ಪೂರ್ಣಿಮೆ ಆಚರಣೆ

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಕಲ್ವಾ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಗುರು ಪೂಜೆ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

By Billavavani
ಕಲ್ವಾ: ಬಿಲ್ಲವರ ಅಸೋಸಿಯೇಷನ್ ಸ್ಥಳೀಯ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಗುರು ಪೂರ್ಣಿಮೆ ಆಚರಣೆ

ಕಲ್ವಾ (ಮುಂಬೈ), ಜು.31: ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಕಲ್ವಾ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಗುರು ಪೂಜೆ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳು ಮತ್ತು ಸಮಾಜಮುಖಿ ಸಂದೇಶಗಳನ್ನು ಸ್ಮರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ವಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಪಾರ ಸಂಖ್ಯೆಯ ಸಮಾಜ ಬಾಂಧವರು ಭಾಗವಹಿಸಿ ಗುರುವಂದನೆ ಸಲ್ಲಿಸಿದರು. ಮುಂಜಾನೆಯಿಂದಲೇ ಭಕ್ತರು ಆಗಮಿಸಿ ವಿಶೇಷ ಗುರು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

1001104752.jpg

ಕಾರ್ಯಕ್ರಮದಲ್ಲಿ ಬಿಲ್ಲವರ ಅಸೋಸಿಯೇಷನ್ ಮುಂಬೈ ಕೇಂದ್ರ ಕಚೇರಿಯ ಕೋಶಾಧಿಕಾರಿ ರವಿ ಎಸ್. ಸನಿಲ್ ಅವರು ಭಾಗವಹಿಸಿ ಶುಭಾಶಯಗಳನ್ನು ತಿಳಿಸಿದರು. ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಸಾಲ್ಯಾನ್ ಬಜಗೋಳಿ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ಹಾಗೂ ಇತರೆ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಪದಾಧಿಕಾರಿಗಳು ಹಾಗೂ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

1001104753.jpg

ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದೊಂದಿಗೆ ನಡೆದ ಈ ಗುರು ಪೂರ್ಣಿಮೆ ಆಚರಣೆಯು ಬಿಲ್ಲವ ಸಮಾಜದ ಒಗ್ಗಟ್ಟು, ಭಕ್ತಿ ಹಾಗೂ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಪ್ರತಿಬಿಂಬಿಸಿತು.