ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಗುರು ಪೂರ್ಣಿಮೆ ಅಂಗವಾಗಿ ಭಕ್ತಿಭಾವದಿಂದ ಮಹಾಪೂಜೆ, ಭಜನಾ ಕಾರ್ಯಕ್ರಮ
ಗುರು ಪೂರ್ಣಿಮೆ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯದಲ್ಲಿ ಬುಧವಾರ ಸಂಜೆ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

ಮಂಗಳೂರು: ಗುರು ಪೂರ್ಣಿಮೆ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯದಲ್ಲಿ ಬುಧವಾರ ಸಂಜೆ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ 6ರಿಂದ 8 ಗಂಟೆಯವರೆಗೆ ನಡೆದ ಕಾರ್ಯಕ್ರಮದಲ್ಲಿ ಭಜನೆ, ಗುರುಗಳಿಗೆ ವಿಶೇಷ ಅಲಂಕಾರ, ಕಾಫಿ ತೀರ್ಥ ಪ್ರಸಾದದೊಂದಿಗೆ ಮಹಾಪೂಜೆ ನೆರವೇರಿಸಲಾಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರು ಕೃಪೆಗೆ ಪಾತ್ರರಾದರು.


ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಲತೀಶ್ ಎಂ. ಸಂಕೋಳಿಗೆ ಅವರು ಗುರು ಪೂರ್ಣಿಮೆಯ ಮಹತ್ವ ಮತ್ತು ಅದರ ಆಧ್ಯಾತ್ಮಿಕ ವಿಶೇಷತೆ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ, ಸಮಿತಿ ಅಧ್ಯಕ್ಷ ಗೋಪಾಲ್ ಕೊಂಡಾಣ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ತ್ರಿವೇಣಿ ಉದಯ್, ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ, ಜಂಟಿ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮವು ಭಕ್ತಿಪೂರ್ಣ ವಾತಾವರಣದಲ್ಲಿ ಸಂಪನ್ನಗೊಂಡಿತು.
