ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷರಾಗಿ ಹೆಚ್.ಆರ್. ರವಿಕುಮಾರ್ ಅವಿರೋಧ ಆಯ್ಕೆ
ಸಾಗರ: ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಸುಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಗರ: ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಸುಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಮಾಜದ ಏಳಿಗೆ, ಸಂಘಟನೆಯ ಬಲವರ್ಧನೆ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತಮ್ಮ ಸರಳ ವ್ಯಕ್ತಿತ್ವ ಮತ್ತು ಸಮರ್ಪಣಾ ಮನೋಭಾವದಿಂದ ಗುರುತಿಸಿಕೊಂಡಿರುವ ಹೆಚ್.ಆರ್. ರವಿಕುಮಾರ್ ಅವರ ಆಯ್ಕೆಯನ್ನು ಸಮಾಜದ ಮುಖಂಡರು ಹಾಗೂ ಸದಸ್ಯರು ಹರ್ಷದಿಂದ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಅವರ ನೇತೃತ್ವದಲ್ಲಿ ಸಾಗರ ಪ್ರಾಂತ್ಯದ ಆರ್ಯ ಈಡಿಗ ಸಮಾಜವು ಇನ್ನಷ್ಟು ಒಗ್ಗಟ್ಟು, ಅಭಿವೃದ್ಧಿ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.