ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಿಂದ ಭಕ್ತರಿಗೆ ಮಹತ್ವದ ಸೂಚನೆ
ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲ ಹಾಗೂ ದೈವಸ್ಥಾನದ ಸಂಪ್ರದಾಯ ಮತ್ತು ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ಪ್ರಕಟಿಸಲಾಗಿದೆ.

ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲ ಹಾಗೂ ದೈವಸ್ಥಾನದ ಸಂಪ್ರದಾಯ ಮತ್ತು ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ಪ್ರಕಟಿಸಲಾಗಿದೆ.
ಹಿಂದೂ ಧಾರ್ಮಿಕ ಸಂಪ್ರದಾಯದಂತೆ ಮಗುವಿಗೆ ಮೊದಲ ಬಾರಿಗೆ ಅನ್ನ ನೀಡುವ ಪದ್ಧತಿಯಿದ್ದು, ಹರಕೆಯ ರೂಪದಲ್ಲಿ ದೈವಸ್ಥಾನದಲ್ಲಿ ಮಗುವಿಗೆ ಅನ್ನಪ್ರಸಾದ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ 6 ತಿಂಗಳಿಂದ 1 ವರ್ಷದೊಳಗಿನ ಮಕ್ಕಳಿಗೆ ಮಾತ್ರ ದೈವಸ್ಥಾನದಲ್ಲಿ ಅನ್ನಪ್ರಸಾದ ನೀಡಲಾಗುವುದು ಎಂದು ತಿಳಿಸಲಾಗಿದೆ.
ಅಲ್ಲದೆ, ಬಾಲ್ಯವಿವಾಹವನ್ನು ನಿಷೇಧಿಸಲಾಗಿದ್ದು, ದೈವಸ್ಥಾನದ ಆವರಣದಲ್ಲಿ ಯಾವುದೇ ರೀತಿಯ ಬಾಲ್ಯವಿವಾಹ ನಡೆಸದಂತೆ ಭಕ್ತಾದಿಗಳಿಗೆ ಸೂಚಿಸಲಾಗಿದೆ.
ಇದೇ ವೇಳೆ, ಆಗಸ್ಟ್ 18ರಿಂದ ದೈವಸ್ಥಾನದಲ್ಲಿ ಅಗರಬತ್ತಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಭಕ್ತಾದಿಗಳು ದೈವಸ್ಥಾನದ ನಿಯಮಗಳು ಹಾಗೂ ಸಂಪ್ರದಾಯಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ:
ದೈವಸ್ಥಾನದ ಕಚೇರಿ ದೂರವಾಣಿ: 7090280166