Skip to content
Billava News

ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆಗೆ ಚಾಲನೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಿ.ಎಲ್. ಸಂತೋಷ್‌ ಉಪಸ್ಥಿತಿ

ಬೈಂದೂರಿನ ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ವತಿಯಿಂದ ಗೋಳಿಹೊಳೆ ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ನೀಡಲಾಯಿತು.

By Billavavani
ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆಗೆ ಚಾಲನೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಿ.ಎಲ್. ಸಂತೋಷ್‌ ಉಪಸ್ಥಿತಿ

ಬೈಂದೂರು: ಬೈಂದೂರಿನ ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ವತಿಯಿಂದ ಗೋಳಿಹೊಳೆ ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಂಗವಾಗಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪರಮಪೂಜ್ಯ ಸ್ವಾಮೀಜಿಯವರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ.ಎಲ್. ಸಂತೋಷ್‌ ಅವರು ಉದ್ಘಾಟಿಸಿದರು.

1001102671.jpg

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದು, ಚಾತುರ್ಮಾಸ್ಯ ವ್ರತಾಚರಣೆಯ ಯಶಸ್ಸಿಗೆ ಶುಭ ಹಾರೈಸಿದರು.