ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ: ಖಾಸಗಿ ರಾಕೆಟ್ ವಿಕ್ರಮ್-1 ನಭಕ್ಕೆ
ಶ್ರೀಹರಿಕೋಟಾ: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಕಕ್ಷೀಯ ರಾಕೆಟ್ 'ವಿಕ್ರಮ್-1' ಶನಿವಾರ ಯಶಸ್ವಿಯಾಗಿ ಉಡ್ಡಯನಗೊಂಡಿದೆ.

ಶ್ರೀಹರಿಕೋಟಾ: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಕಕ್ಷೀಯ ರಾಕೆಟ್ 'ವಿಕ್ರಮ್-1' ಶನಿವಾರ ಯಶಸ್ವಿಯಾಗಿ ಉಡ್ಡಯನಗೊಂಡಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಮಧ್ಯಾಹ್ನ 12.05 ಗಂಟೆಗೆ ವಿಕ್ರಮ್-1 ರಾಕೆಟ್ ನಭಕ್ಕೆ ಚಿಮ್ಮಿತು.
ಖಾಸಗಿ ಸಂಸ್ಥೆಯು ಅಭಿವೃದ್ಧಿಪಡಿಸಿದ ಭಾರತದ ಮೊದಲ ಕಕ್ಷೀಯ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಕ್ರಮ್-1 ಉಡ್ಡಯನವು ದೇಶದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಅಧ್ಯಾಯವನ್ನು ತೆರೆದಿದೆ. ಈ ಸಾಧನೆಯು ಭಾರತದ ಬಾಹ್ಯಾಕಾಶ ತಂತ್ರಜ್ಞಾನ, ನಾವೀನ್ಯತೆ ಹಾಗೂ ಖಾಸಗಿ ವಲಯದ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.
ಈ ಯಶಸ್ವಿ ಉಡ್ಡಯನದೊಂದಿಗೆ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ದಾಖಲಿಸಿದ್ದು, ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆಗೆ ಇದು ಮಹತ್ವದ ಉತ್ತೇಜನ ನೀಡಲಿದೆ.