Skip to content
Billava News

ಕರಾವಳಿಯ ವೈಭವ ‘ಮಂಗಳೂರು ದಸರಾ’ಕ್ಕೆ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ

ಕರಾವಳಿಯ ಸಾಂಸ್ಕೃತಿಕ ವೈಭವ ಮತ್ತು ನವದುರ್ಗೆಯರ ಮಹೋತ್ಸವವೆಂದೇ ಖ್ಯಾತಿ ಪಡೆದಿರುವ ಮಂಗಳೂರು ದಸರಾಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.

By Billavavani
ಕರಾವಳಿಯ ವೈಭವ ‘ಮಂಗಳೂರು ದಸರಾ’ಕ್ಕೆ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ

ಮಂಗಳೂರು, ಸೆ. 2: ಕರಾವಳಿಯ ಸಾಂಸ್ಕೃತಿಕ ವೈಭವ ಮತ್ತು ನವದುರ್ಗೆಯರ ಮಹೋತ್ಸವವೆಂದೇ ಖ್ಯಾತಿ ಪಡೆದಿರುವ ಮಂಗಳೂರು ದಸರಾಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.

IMG_4161.jpeg

ಬ್ರಹ್ಮಶ್ರೀ ನಾರಾಯಣ ಗುರುಗಳ ಪಾವನ ಸನ್ನಿಧಿಯಾಗಿರುವ ಹಾಗೂ ಸಮಾನತೆ, ಸೌಹಾರ್ದತೆ ಮತ್ತು ಸಂಸ್ಕೃತಿಯ ಸಂಗಮ ಕ್ಷೇತ್ರವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹೋತ್ಸವದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.

IMG_4163.jpeg

ಮಂಗಳೂರು ದಸರಾದ ಇತಿಹಾಸ, ಕರಾವಳಿಯ ಸಾಂಸ್ಕೃತಿಕ ಪರಂಪರೆ ಹಾಗೂ ನವದುರ್ಗೆಯರ ವೈಭವದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕುದ್ರೋಳಿ ಕ್ಷೇತ್ರಕ್ಕೆ ಬರುವುದೇ ಒಂದು ವಿಶೇಷ ಅನುಭವ. ನಾರಾಯಣ ಗುರುಗಳ ಉನ್ನತ ಆಶಯಗಳು ಹಾಗೂ ಕರಾವಳಿಯ ಜನರ ಸಂಸ್ಕೃತಿಯ ಪ್ರತೀಕವಾಗಿರುವ ಈ ಮಹೋತ್ಸವದಲ್ಲಿ ಭಾಗವಹಿಸುವುದು ನನಗೆ ಹೆಮ್ಮೆಯ ವಿಷಯ” ಎಂದು ಸಂತಸ ವ್ಯಕ್ತಪಡಿಸಿದರು.

IMG_4164.jpeg

ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಹೆಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ ಹಾಗೂ ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ ವೇದಕುಮಾರ್, ಲೀಲಾಕ್ಷ ಕರ್ಕೇರ ಮತ್ತು ಸೂರ್ಯಕಾಂತ್ ಜೆ. ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಕೋಶಾಧಿಕಾರಿ ಯೋಗೀಶ್ ಕುಮಾರ್ ಮೂಲ್ಕಿ ಹಾಗೂ ಕಾರವಾರದ ನ್ಯಾಯವಾದಿ ಜಿ.ಟಿ. ನಾಯ್ಕ್ ಉಪಸ್ಥಿತರಿದ್ದರು. ಅವರು ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.

IMG_4165.jpeg