ಗುರು ಸಾಮರಸ್ಯ ಜಾಥಾ, ರಾಜ್ಯ ಮಟ್ಟದ ಭಾಷಣ ಸ್ಪರ್ಧೆ: ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ಇದರ ನೇತೃತ್ವದಲ್ಲಿ ಆಗಸ್ಟ್ 30ರಂದು ನಡೆಯಲಿರುವ ಗುರು ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಬನ್ನಂಜೆಯ ಬಿಲ್ಲವರ ಸೇವಾ ಸಂಘದಲ್ಲಿ ಬಿಡುಗಡೆ ಮಾಡಲಾಯಿತು.

ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ಇದರ ನೇತೃತ್ವದಲ್ಲಿ ಆಗಸ್ಟ್ 30ರಂದು ನಡೆಯಲಿರುವ ಗುರು ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಬನ್ನಂಜೆಯ ಬಿಲ್ಲವರ ಸೇವಾ ಸಂಘದಲ್ಲಿ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ ವಹಿಸಿದ್ದರು. ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಶಿಧರ್ ಅಮೀನ್, ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷ ಬಿನ್ ಎನ್. ಶಂಕರ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್ ಅಂಚನ್, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಳ್ ಕುಮಾರ್, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ, ಬ್ರಹ್ಮ ಬೈದೆರ್ಕಳ ಅಧ್ಯಯನ ಸಾಂಸ್ಕೃತಿಕ ಕೇಂದ್ರ, ಉಡುಪಿಯ ಅಧ್ಯಕ್ಷ ಸೂರ್ಯೋದಯ ಪರಂಪಳ್ಳಿ, ವೇದಿಕೆಯ ಗೌರವಾಧ್ಯಕ್ಷ ದಿವಾಕರ್ ಸನಿಲ್ ಹಾಗೂ ಹಿರಿಯ ಗೌರವ ಸಲಹೆಗಾರ ಸುಧಾಕರ್ ಡಿ. ಪಾಂಗಾಳ ಉಪಸ್ಥಿತರಿದ್ದರು.
ಇದಲ್ಲದೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವ ಸಲಹೆಗಾರರು, ಜಿಲ್ಲೆಯ ವಿವಿಧ ಬಿಲ್ಲವ ಸಂಘಗಳ ಅಧ್ಯಕ್ಷರು, ಗುರುಗಳ ಅನುಯಾಯಿಗಳು ಹಾಗೂ ಗುರು ಸಾಮರಸ್ಯ ಜಾಥಾದ ಸಂಚಾಲಕರು ಉಪಸ್ಥಿತರಿದ್ದರು.
ವೇದಿಕೆಯ ಉಪಾಧ್ಯಕ್ಷ ಮಹೇಶ್ ಕುಮಾರ್ ಮಲ್ಪೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಜೇಯ ಪೂಜಾರಿ ಮೇಲ್ಮನೆ ವಂದಿಸಿದರು. ಸುರೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಗುರು ಸಾಮರಸ್ಯ, ಸಾಮಾಜಿಕ ಏಕತೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದರು.
