Skip to content
Tulunadu Special

ಮಂಗಳೂರು ಜಿಲ್ಲೆ ಮರುನಾಮಕರಣ, ತುಳುವಿಗೆ ರಾಜ್ಯ ಭಾಷಾ ಮಾನ್ಯತೆ ನೀಡಲು ತುಳು ಪರ ಹೋರಾಟ ಸಮಿತಿಯ ಸಂಚಾಲಕ ಹಾಗೂ ಮಾಜಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್‌ಕುಮಾರ್ ಕೋಡಿಕಲ್ ಮನವಿ

ಮಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯನ್ನು “ಮಂಗಳೂರು ಜಿಲ್ಲೆ” ಎಂದು ಮರುನಾಮಕರಣ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ...

By Billavavani
ಮಂಗಳೂರು ಜಿಲ್ಲೆ ಮರುನಾಮಕರಣ, ತುಳುವಿಗೆ ರಾಜ್ಯ ಭಾಷಾ ಮಾನ್ಯತೆ ನೀಡಲು ತುಳು ಪರ ಹೋರಾಟ ಸಮಿತಿಯ ಸಂಚಾಲಕ ಹಾಗೂ ಮಾಜಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್‌ಕುಮಾರ್ ಕೋಡಿಕಲ್ ಮನವಿ

ಮಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯನ್ನು “ಮಂಗಳೂರು ಜಿಲ್ಲೆ” ಎಂದು ಮರುನಾಮಕರಣ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮಂಗಳೂರು ಜಿಲ್ಲೆ ತುಳು ಪರ ಹೋರಾಟ ಸಮಿತಿಯ ಸಂಚಾಲಕ ಹಾಗೂ ಮಾಜಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್‌ಕುಮಾರ್ ಕೋಡಿಕಲ್ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಮಂಗಳೂರು ಎಂಬುದು ಕರಾವಳಿಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಜಾಗತಿಕವಾಗಿ ಗುರುತಿಸಿಕೊಂಡಿರುವ ಹೆಸರಾಗಿದೆ. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರಾವಳಿಯ ಜನರ ಪ್ರಮುಖ ಬೇಡಿಕೆಯಾಗಿರುವ ತುಳು ಭಾಷೆಗೆ ಕರ್ನಾಟಕದ ರಾಜ್ಯ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಿರಣ್‌ಕುಮಾರ್ ಕೋಡಿಕಲ್ ಮನವಿ ಮಾಡಿದ್ದಾರೆ.

ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಹಾಗೂ ತುಳು ಭಾಷೆಗೆ ಸೂಕ್ತ ರಾಜ್ಯ ಮಾನ್ಯತೆ — ಈ ಎರಡು ಪ್ರಮುಖ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಅವರು ಸಕಾರಾತ್ಮಕ ನಿರ್ಧಾರ ಕೈಗೊಂಡು ಕರಾವಳಿ ಜನರ ಬಹುದಿನಗಳ ಆಶಯವನ್ನು ಈಡೇರಿಸಬೇಕು ಎಂದು ಅವರು ವಿನಂತಿಸಿದ್ದಾರೆ.