Skip to content
Billava News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಮಂಗಳೂರು ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿರುವ ಮಂಗಳೂರು ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಗುರುವಾರ ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

By Billavavani

Mangaluru Dasara.jpeg

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ, ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ. ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್, ಕದ್ರಿ ಶ್ರೀ ಮಂಜುನಾಥ ದೇವಳದ ಟ್ರಸ್ಟಿ ರಾಜೇಂದ್ರ ಚಿಲಿಂಬಿ, ರವಿರಾಜ್, ಸುಭಾಷ್ ಭಂಡಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Mangaluru Dasara3.jpeg

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಆಮಂತ್ರಣ ಪತ್ರಿಕೆಯಲ್ಲಿ ಮಾಹಿತಿ ನೀಡಲಾಗಿದೆ.