Skip to content
Billava News

“ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮಗಳನ್ನು ಗೌರವಿಸೋಣ” - ಗೇರು ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಅಧ್ಯಕ್ಷೆ ಮಮತಾ ಗಟ್ಟಿ

ಕೊಲ್ಯ: ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಹಾಗೂ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯದ ಆಶ್ರಯದಲ್ಲಿ, ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ...

By Billavavani
 “ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮಗಳನ್ನು ಗೌರವಿಸೋಣ” - ಗೇರು ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಅಧ್ಯಕ್ಷೆ ಮಮತಾ ಗಟ್ಟಿ

ಕೊಲ್ಯ: ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಹಾಗೂ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯದ ಆಶ್ರಯದಲ್ಲಿ, ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಕಾರ್ಯಕ್ರಮವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಯದ ಅಧ್ಯಕ್ಷ ಚಂದ್ರಹಾಸ ಪಂಡಿತ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಗೇರು ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, “ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮಗಳನ್ನು ಗೌರವಿಸೋಣ” ಎಂಬ ಸಂದೇಶ ನೀಡಿದರು.

222.jpeg

ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ ಸಿ.ಎ. ಶ್ರೀವತ್ಸ ಎನ್. ಬಲ್ಲಕುರಾಯ, ಆತ್ಮಶಕ್ತಿ ಪತ್ರಿಕೆಯ ಸಹಾಯಕ ಸಂಪಾದಕ ವಿಶ್ವನಾಥ ಪೂಜಾರಿ ಕೆಂಜಾರು ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

1 (4).jpeg

ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯದ ಅಧ್ಯಕ್ಷ ಗೋಪಾಲ ಕೊಂಡಾಣ, ನಾರಾಯಣ ಗುರು ಮಹಿಳಾ ಮಂಡಳಿ ಅಧ್ಯಕ್ಷೆ ತ್ರಿವೇಣಿ ಉದಯ್ ಕುಂಪಲ ಹಾಗೂ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಅವರು ಗುರು ಜಯಂತಿಯ ಹಿನ್ನೆಲೆಯಲ್ಲಿ ಶುಭ ಹಾರೈಸಿದರು.