Skip to content
Billava News

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ)ಯ ಮುಂಬೈ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು...

By Billavavani
ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ)ಯ ಮುಂಬೈ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿಯವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ, ಮುಂಬೈ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಿಲಿಂದ್ (ಅಣ್ಣಾ) ಕಾಂಬಳೆ ಅವರು ನಿಯುಕ್ತಿ ಪತ್ರವನ್ನು ನೀಡಿರುತ್ತಾರೆ.

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು, ಉದ್ಯಮದ ಜೊತೆಗೆ ಸಮಾಜಸೇವೆಯಲ್ಲಿಯೂ ಗುರುತಿಸಿಕೊಂಡಿರುವ ಇವರು ಗಾಂವ್‌ದೇವಿ ಪ್ರತಿಷ್ಠಾನ, ಮುಂಬೈ ಇದರ ಅಧ್ಯಕ್ಷರಾಗಿದ್ದು, ಅಖಿಲ ಗಾಂವ್‌ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ-ಸಂಸ್ಥೆಗಳ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಹುಟ್ಟೂರಿನ ಸಮುದಾಯ ಬಂಧುಗಳನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘವನ್ನು ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ಇದೀಗ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.