Skip to content
Billava News

ರಾಜ್ಯಮಟ್ಟದ ಟೇಬಲ್ ಟೆನಿಸ್‌ನಲ್ಲಿ ಪ್ರಥಮ ಸ್ಥಾನ: ಮಲ್ಪೆ ಶ್ರೀ ನಾರಾಯಣಗುರು ಶಾಲೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮಲ್ಪೆ: ರಾಜ್ಯಮಟ್ಟದ 14ರ ವಯೋಮಾನದ ಟೇಬಲ್ ಟೆನಿಸ್ ಟೂರ್ನಮೆಂಟ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಲೇಖನ್ ಸಾಲ್ಯಾನ್ ಹಾಗೂ ಸಾತ್ವಿಕ್ ಪ್ರಶಾಂತ್ ಪೂಜಾರಿ ಅವರಿಗೆ ಗುರುವಾರ ಅದ್ದೂರಿ ಸ್ವಾಗತ ನೀಡಲಾಯಿತು.

By Billavavani

1001212368.jpg

ಶಾಲಾಡಳಿತ ಸಮಿತಿಯ ವತಿಯಿಂದ ಆಯೋಜಿಸಲಾದ ಸ್ವಾಗತ ಕಾರ್ಯಕ್ರಮದ ಅಂಗವಾಗಿ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಬ್ಯಾಂಡ್ ಹಾಗೂ ವಾದ್ಯಘೋಷಗಳೊಂದಿಗೆ ಮೆರವಣಿಗೆ ನಡೆಸಿ, ವಿಜೇತ ವಿದ್ಯಾರ್ಥಿಗಳನ್ನು ಶಾಲೆಯವರೆಗೆ ಕರೆತರಲಾಯಿತು. ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಲ್ಪೆ ಪೊಲೀಸ್ ಠಾಣಾಧಿಕಾರಿ ಅನಿಲ್ ಕುಮಾರ್ ಡಿ., ಶಾಲಾಡಳಿತ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಮಲ್ಪೆ, ಕಾರ್ಯದರ್ಶಿ ಕುಶ ಎಂ. ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ರತ್ನಾಕರ ಅಮೀನ್, ಪ್ರಧಾನ ಕಾರ್ಯದರ್ಶಿ ಮನೋಹರ ಜತ್ತನ್, ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಆರ್. ಅಮೀನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರವತಿ ಕೆ., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕಾವ್ಯ ಜೆ. ಕೋಟ್ಯಾನ್ ಸೇರಿದಂತೆ ಸಂಘ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

1001212367.jpg

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈದು ಶಾಲೆ ಹಾಗೂ ಮಲ್ಪೆ ಪರಿಸರಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಗೆ ಗಣ್ಯರು ಅಭಿನಂದನೆ ಸಲ್ಲಿಸಿದರು.