ಮಂಗಳೂರಿನಲ್ಲಿ ಅ.17ರಂದು ‘ಮಂಗಳೂರು ಯುವ ದಸರಾ 2026’ ವೈಭವ
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಯುವ ಸಂಭ್ರಮಕ್ಕೆ ವೇದಿಕೆ ಸಜ್ಜಾಗಿದ್ದು, ‘ಮಂಗಳೂರು ಯುವ ದಸರಾ 2026’ ಕಾರ್ಯಕ್ರಮ ಅಕ್ಟೋಬರ್ 17ರಂದು ಅದ್ದೂರಿಯಾಗಿ ನಡೆಯಲಿದೆ.

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಯುವ ಸಂಭ್ರಮಕ್ಕೆ ವೇದಿಕೆ ಸಜ್ಜಾಗಿದ್ದು, ‘ಮಂಗಳೂರು ಯುವ ದಸರಾ 2026’ ಕಾರ್ಯಕ್ರಮ ಅಕ್ಟೋಬರ್ 17ರಂದು ಅದ್ದೂರಿಯಾಗಿ ನಡೆಯಲಿದೆ.
ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಗೀತ, ಸಂಸ್ಕೃತಿ, ಮನರಂಜನೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಲಿವೆ.
ಮಂಗಳೂರಿನ ಯುವಜನತೆಯ ಉತ್ಸಾಹ, ಪ್ರತಿಭೆ ಹಾಗೂ ನಗರದ ಸಾಂಸ್ಕೃತಿಕ ವೈಭವವನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ಅದ್ದೂರಿ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ.
ಒಂದೇ ಸಂಜೆ, ಅದ್ದೂರಿ ಆಚರಣೆ ಎಂಬ ಆಶಯದೊಂದಿಗೆ ನಡೆಯಲಿರುವ ‘ಮಂಗಳೂರು ಯುವ ದಸರಾ 2026’ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಯುವಜನರು ಭಾಗವಹಿಸಿ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂತೆ ಆಯೋಜಕರು ಕರೆ ನೀಡಿದ್ದಾರೆ.