Skip to content
Billava News

ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ...

By Billavavani
ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ

ಮುಂಡ್ಲಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ ಸಂದರ್ಭದಲ್ಲಿ ಮುಂಡ್ಲಿಯ ಬಿಲ್ಲವ ಸಂಘಕ್ಕೆ ಭೇಟಿ ನೀಡಿದರು.

1001090351.jpg

ಈ ವೇಳೆ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಸಂಘದ ವಿವಿಧ ಸಾಮಾಜಿಕ ಹಾಗೂ ಸಂಘಟನಾ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ, ಸಂಘದ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಚರ್ಚಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಸಮಾಜದ ಅಭಿವೃದ್ಧಿಗೆ ಸಂಘಗಳು ವಹಿಸುತ್ತಿರುವ ಪಾತ್ರವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.