ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಾನ್ವಿ ಎಂ. ಪೂಜಾರಿಗೆ ಬೆಳ್ಳಿ ಪದಕ
ತೊಕ್ಕೊಟ್ಟು: ಮೈಸೂರಿನಲ್ಲಿ ಅಕ್ಟೋಬರ್ 13ರಂದು ನಡೆದ ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬಬ್ಬುಕಟ್ಟೆಯ ಮಾನ್ವಿ ಎಂ. ಪೂಜಾರಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಫಿಸಿಯೋಥೆರಪಿ ಪದವಿಯ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮಾನ್ವಿ, ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ತೊಕ್ಕೊಟ್ಟಿನಲ್ಲಿ ವಿನೋದ್ ಕುಮಾರ್ ರಾವ್ ಅವರ ಮಾರ್ಗದರ್ಶನದಲ್ಲಿ ಕರಾಟೆ ಹಾಗೂ ಮಂಗಳೂರಿನಲ್ಲಿ ಶಿವಪ್ರಸಾದ್ ಆಚಾರ್ಯ ಅವರಿಂದ ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ.
ಕರಾಟೆಯಲ್ಲಿ 3ನೇ ಡಾನ್ ಬ್ಲ್ಯಾಕ್ ಬೆಲ್ಟ್ ಹೊಂದಿರುವ ಅವರು, ರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಪಟುವಾಗಿದ್ದಾರೆ. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಗೆದ್ದಿರುವ ಮಾನ್ವಿ, ಪ್ರಸ್ತುತ 15 ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡುವ ಮೂಲಕ ಯುವ ಪೀಳಿಗೆಗೂ ಈ ಕಲೆಯನ್ನು ಪರಿಚಯಿಸುತ್ತಿದ್ದಾರೆ.
ಬಬ್ಬುಕಟ್ಟೆಯ ಮುಖೇಶ್ ಮತ್ತು ರುಕ್ಮಿಣಿ ದಂಪತಿಯ ಪುತ್ರಿಯಾಗಿರುವ ಮಾನ್ವಿ, ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ತಮ್ಮ ಕ್ರೀಡಾ ಪಯಣದಲ್ಲಿ ಮತ್ತೊಂದು ಮಹತ್ವದ ಸಾಧನೆಯ ಮೈಲಿಗಲ್ಲು ಸ್ಥಾಪಿಸಿದ್ದಾರೆ.