Skip to content
Billava News

ಪ್ರದೀಪ್ ಪೂಜಾರಿ ಪ್ರಕರಣ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಗೃಹ ಇಲಾಖೆಗೆ ಒತ್ತಾಯಿಸಿದ್ದೇನೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಹಿರಿಯಡ್ಕದ ದಿವಂಗತ ಪ್ರದೀಪ್ ಪೂಜಾರಿ ಅವರ ಮನೆಗೆ ಘಟನೆ ನಡೆದ ದಿನವೇ ಭೇಟಿ ನೀಡಿ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದೆ. ಇದೇ ಸಂದರ್ಭದಲ್ಲಿ ಸ್ಥಳದಿಂದ…

By Billavavani
ಪ್ರದೀಪ್ ಪೂಜಾರಿ ಪ್ರಕರಣ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಗೃಹ ಇಲಾಖೆಗೆ ಒತ್ತಾಯಿಸಿದ್ದೇನೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಹಿರಿಯಡ್ಕದ ದಿವಂಗತ ಪ್ರದೀಪ್ ಪೂಜಾರಿ ಅವರ ಮನೆಗೆ ಘಟನೆ ನಡೆದ ದಿನವೇ ಭೇಟಿ ನೀಡಿ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದೆ. ಇದೇ ಸಂದರ್ಭದಲ್ಲಿ ಸ್ಥಳದಿಂದಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪ್ರದೀಪ್ ಪೂಜಾರಿ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕಿರುವುದು ಅವರ ಕರ್ತವ್ಯ ಲೋಪವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಒತ್ತಾಯಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

IMG_4718.jpeg

ಘಟನೆಯಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.