ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಸಂಸದರ ತಂಡದಿಂದ ಮನವಿ
ವಿದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಕಳಪೆ ಗುಣಮಟ್ಟದ ಅಡಿಕೆ ಆಮದಾಗುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ, ಸಂಸದರ ತಂಡವು ಕೇಂದ್ರ ಗೃಹ ಸಚಿವ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಕಳಪೆ ಗುಣಮಟ್ಟದ ಅಡಿಕೆ ಆಮದಾಗುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ, ಸಂಸದರ ತಂಡವು ಕೇಂದ್ರ ಗೃಹ ಸಚಿವ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಅವರೊಂದಿಗೆ ನಿಯೋಗವು ಗೃಹ ಸಚಿವರನ್ನು ಭೇಟಿ ಮಾಡಿ, ಇಂಡೋನೇಷ್ಯಾ, ಬಾಂಗ್ಲಾದೇಶ, ಮಯನ್ಮಾರ್ ಸೇರಿದಂತೆ ವಿವಿಧ ದೇಶಗಳಿಂದ ಸಮುದ್ರ ಮಾರ್ಗ ಹಾಗೂ ನೆರೆಯ ರಾಷ್ಟ್ರಗಳ ಮೂಲಕ ಅಕ್ರಮವಾಗಿ ಅಡಿಕೆ ದೇಶಕ್ಕೆ ಸಾಗಾಟವಾಗುತ್ತಿರುವ ಬಗ್ಗೆ ಗಮನ ಸೆಳೆಯಿತು.
ಅಕ್ರಮವಾಗಿ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುವ ಘಟನೆಗಳು ವರದಿಯಾಗುತ್ತಿದ್ದು, ಇದರಿಂದ ಕರ್ನಾಟಕ, ಕೇರಳ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಲಕ್ಷಾಂತರ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಯಿತು.
ಅಕ್ರಮ ಅಡಿಕೆ ಆಮದನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ನಿಯೋಗ ಮನವಿ ಮಾಡಿತು. ಮನವಿಗೆ ಸ್ಪಂದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.
