Skip to content
Tulunadu Special

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ನಾಡಹಬ್ಬದ ಕಣದಲ್ಲಿ ಕರಾವಳಿಯ ವೈಭವಕ್ಕೆ ಮೆರುಗು!

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಲಾದ ಕಂಬಳ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು.

By Billavavani
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ನಾಡಹಬ್ಬದ ಕಣದಲ್ಲಿ ಕರಾವಳಿಯ ವೈಭವಕ್ಕೆ ಮೆರುಗು!

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಲಾದ ಕಂಬಳ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಹಾಗೂ ವೀರ ಗಂಗಾಧರ ಅಜ್ಜಯ್ಯ ಅವರ ಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.

ಕರಾವಳಿ ಕರ್ನಾಟಕದ ಜನಪ್ರಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವು ಕರಾವಳಿಯ ಮಣ್ಣಿನ ಸೊಗಡು, ಜನಪದ ಸಂಸ್ಕೃತಿಯ ಶ್ರೀಮಂತಿಕೆ ಹಾಗೂ ತಲೆಮಾರುಗಳಿಂದ ಉಳಿಸಿಕೊಂಡು ಬಂದಿರುವ ಸಂಪ್ರದಾಯಗಳ ಪ್ರತೀಕವಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳಕ್ಕೆ ಅವಕಾಶ ಕಲ್ಪಿಸಿರುವುದು ಕರಾವಳಿಯ ಸಾಂಸ್ಕೃತಿಕ ವೈಭವವನ್ನು ನಾಡಿನಾದ್ಯಂತ ಪರಿಚಯಿಸುವ ಮಹತ್ವದ ಹೆಜ್ಜೆಯಾಗಿದೆ.

1001202796.jpg

ನಾಡಿನ ವೈವಿಧ್ಯಮಯ ಸಂಸ್ಕೃತಿ, ಸಂಪ್ರದಾಯ ಮತ್ತು ಜನಪದ ಪರಂಪರೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಇಂತಹ ಕಾರ್ಯಕ್ರಮಗಳು ಕರ್ನಾಟಕದ ಸಾಂಸ್ಕೃತಿಕ ಏಕತೆ ಹಾಗೂ ಶ್ರೀಮಂತ ಪರಂಪರೆಯನ್ನು ಮತ್ತಷ್ಟು ಬಲಪಡಿಸುತ್ತವೆ.

1001202795.jpg

ಕಾರ್ಯಕ್ರಮದಲ್ಲಿ ಸಚಿವರಾದ ಪುಟ್ಟರಂಗಶೆಟ್ಟಿ ಹಾಗೂ ಎನ್. ಚಲುವರಾಯಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಕೆ. ಹರೀಶ್ ಗೌಡ ಹಾಗೂ ಅಶೋಕ್ ರೈ, ಮಾಜಿ ಶಾಸಕ ನರೇಂದ್ರ ಬಾಬು, ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಬೋವಿ ನಿಗಮದ ಅಧ್ಯಕ್ಷ ರಾಮಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

1001202797.jpg1001202794.jpg