ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಪಶ್ಚಿಮ ವಲಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆ ಹಾಗೂ ಪತ್ತೆ ಕಾರ್ಯಕ್ಕೆ ಆದ್ಯತೆ ನೀಡುವುದರ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಲಪಡಿಸುವುದು ತಮ್ಮ ಗುರಿಯಾಗಿದೆ ಎಂದು ಶಶಿಕುಮಾರ್ ತಿಳಿಸಿದರು.

ಈ ಹಿಂದೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಸ್ಥಳೀಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ನಾಲ್ಕು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪ್ರವಾಸೋದ್ಯಮ, ಜನಸಂಚಾರ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲಾಗುವುದು. ತುರ್ತು ಸಂದರ್ಭಗಳಲ್ಲಿ ತ್ವರಿತ ಪೊಲೀಸ್ ಸ್ಪಂದನೆ ಹಾಗೂ ಸಾರ್ವಜನಿಕರ ಸಹಕಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಪಶ್ಚಿಮ ವಲಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸಾಮಾಜಿಕ ಸಂಘಟನೆಗಳ ಸಹಕಾರ ಅಗತ್ಯ ಎಂದು ಅವರು ಮನವಿ ಮಾಡಿದರು.