ಸಂಘಟನೆಯ ಮಹತ್ವವನ್ನು ಜಗತ್ತಿಗೆ ಸಾರಿದವರು ನಾರಾಯಣ ಗುರುಗಳು: ರಾಜೇಶ್ ಬಲ್ಯ
ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದಿನ ಕಾಲದಲ್ಲಿಯೇ ವಿದ್ಯೆ, ಸಂಘಟನೆ ಹಾಗೂ ಸಾಮಾಜಿಕ ಬದ್ಧತೆಗೆ ಹೆಚ್ಚಿನ ಒತ್ತು ನೀಡಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಕಾರಣರಾದ ಅವರು, ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಬದುಕಬೇಕು.

ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದಿನ ಕಾಲದಲ್ಲಿಯೇ ವಿದ್ಯೆ, ಸಂಘಟನೆ ಹಾಗೂ ಸಾಮಾಜಿಕ ಬದ್ಧತೆಗೆ ಹೆಚ್ಚಿನ ಒತ್ತು ನೀಡಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಕಾರಣರಾದ ಅವರು, ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಬದುಕಬೇಕು. ಯಾರನ್ನೂ ಕೀಳು-ಮೇಲು ಎಂಬ ಭೇದಭಾವದಿಂದ ನೋಡಬಾರದು ಎಂಬ ಸಂದೇಶವನ್ನು ಸಮಾಜಕ್ಕೆ ಸಾರಿದರು ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಸದಸ್ಯರಾದ ಶ್ರೀ ರಾಜೇಶ್ ಬಲ್ಯ ಹೇಳಿದರು.
ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಗಸ್ಟ್ 30ರಂದು ಸಮಾಜ ಸೇವಾ ನಿರ್ದೇಶಕರಾದ ಶ್ರೀ ಸುರೇಶ್ ಬಾಕಿಲ ಅವರ ಮನೆಯಲ್ಲಿ ಆಯೋಜಿಸಲಾಗಿದ್ದ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಒಬ್ಬ ವ್ಯಕ್ತಿಯಿಂದ ಮಾಡಲು ಸಾಧ್ಯವಾಗದ ಕೆಲಸವನ್ನು ಸಂಘಟನೆಯ ಮೂಲಕ ಮಾಡಬಹುದು. ಸಂಘಟನೆಯು ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಹೊಂದಿದೆ. ಎಲ್ಲರೂ ಒಟ್ಟಾಗಿ ಒಂದೇ ಮನಸ್ಸಿನಿಂದ ಸಂಘಟನೆಯಲ್ಲಿ ಸೇವೆ ಸಲ್ಲಿಸಿದಾಗ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಈ ಸಂಘಟನಾ ಶಕ್ತಿಯ ಮಹತ್ವವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದಿನ ಕಾಲದಲ್ಲಿಯೇ ಸಮಾಜಕ್ಕೆ ತಿಳಿಸಿಕೊಟ್ಟಿದ್ದರು,” ಎಂದು ರಾಜೇಶ್ ಬಲ್ಯ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಗಣೇಶ್ ಕೊಡಾಜೆ ಮಾತನಾಡಿ, ಯುವವಾಹಿನಿ (ರಿ.) ಮಾಣಿ ಘಟಕವು ಕಳೆದ ಎರಡು-ಮೂರು ವರ್ಷಗಳಿಂದ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಗುರುಗಳ ತತ್ವ, ಅವರು ಸಮಾಜದಲ್ಲಿ ತಂದ ಸಾಮಾಜಿಕ ಕ್ರಾಂತಿ ಹಾಗೂ ಜಗತ್ತಿಗೆ ಸಾರಿದ ಸಂದೇಶಗಳನ್ನು ಪ್ರತಿಯೊಂದು ಮನೆ ಹಾಗೂ ಮನಗಳಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
“ಬ್ರಹ್ಮಶ್ರೀ ನಾರಾಯಣ ಗುರುಗಳು ಎಲ್ಲಾ ಸಮಾಜದ ಗುರುಗಳು. ಅವರ ಜೀವನ ಚರಿತ್ರೆ, ಆದರ್ಶಗಳು ಹಾಗೂ ಸಂದೇಶಗಳನ್ನು ಎಲ್ಲರೂ ತಿಳಿದುಕೊಳ್ಳುವುದರ ಜೊತೆಗೆ, ಮುಂದಿನ ಪೀಳಿಗೆಗೂ ತಿಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು,” ಎಂದು ಗಣೇಶ್ ಕೊಡಾಜೆ ಹೇಳಿದರು.

ಕಾರ್ಯಕ್ರಮದಲ್ಲಿ ಘಟಕದ ನಾರಾಯಣ ಗುರುತತ್ವ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಶ್ರೀ ಶ್ರೀಧರ ಮುಜಲಾ, ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಶ್ರೀ ನಾರಾಯಣ ಸಾಲ್ಯಾನ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಗೌರವಾನ್ವಿತ ಸದಸ್ಯರು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿ ಶ್ರೀ ವಿಶ್ವನಾಥ ಪೂಜಾರಿ ದರ್ಖಾಸು ಸ್ವಾಗತಿಸಿದರು. ಡಾ. ತ್ರಿವೇಣಿ ರಮೇಶ್ ಮುಜಾಲ ಅವರು ಧನ್ಯವಾದ ಸಮರ್ಪಿಸಿದರು.
