Skip to content
Billava News

ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಾರಾಯಣಗುರು ಜಯಂತಿ: ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಾರಾಯಣಗುರು ಜಯಂತಿ: ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

By Billavavani
ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಾರಾಯಣಗುರು ಜಯಂತಿ: ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಲ್ಪೆ: ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತ್ಯುತ್ಸವದ ಅಂಗವಾಗಿ ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಆ.28ರಂದು ಜರುಗಿದವು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ, ಭಜನಾ ಸಂಕೀರ್ತನೆ ಹಾಗೂ ಗುರುಪೂಜೆ ನೆರವೇರಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೋಪಾಲ ಸಿ. ಬಂಗೇರ ವಹಿಸಿದ್ದರು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಮುಖ್ಯ ಅತಿಥಿಯಾಗಿ ಮಾತನಾಡಿ, ನಾರಾಯಣಗುರುಗಳು ಪ್ರತಿಯೊಬ್ಬರೂ ವಿದ್ಯಾವಂತರಾಗಿ ಸ್ವಾಭಿಮಾನದಿಂದ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣಕ್ಕೆ ವಿಶೇಷ ಮಹತ್ವ ನೀಡಿದ್ದರು. ಧರ್ಮ, ಜಾತಿ, ಮತ ಯಾವುದೇ ಇರಲಿ, ಮನುಷ್ಯ ಒಳ್ಳೆಯವನಾಗಿದ್ದರೆ ಸಾಕು ಎಂಬ ವಿಶ್ವಮಾನ್ಯ ಸಂದೇಶವನ್ನು ಅವರು ಜಗತ್ತಿಗೆ ನೀಡಿದ್ದಾರೆ ಎಂದರು.

1001180450.jpg1001180432.jpg

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ನಾವೆಲ್ಲರೂ ಅಕ್ಕ-ತಂಗಿಯರ ಮಕ್ಕಳಂತೆ ಒಗ್ಗಟ್ಟಿನಿಂದ ಇರಬೇಕು. ನಾರಾಯಣಗುರುಗಳ ತತ್ವಾದರ್ಶಗಳನ್ನು ಸಂಪೂರ್ಣವಾಗಿ ಪಾಲಿಸಿಕೊಂಡು ಬಂದರೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಸಾಧ್ಯ ಎಂದರು.

1001180449.jpg1001180448.jpg

ಸಾಧಕರಿಗೆ ಗೌರವ

ಕ್ರೀಡಾ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಂಗಾಧರ್ ಜಿ. ಕಡೆಕಾರ್, ಡಾ. ಸುರೇಖಾ ಕೆ., ಮಾಲ್ ಗ್ಯಾನ್ ಜಿ. ಪಾಲನ್, ಕೃಷ್ಣಪ್ಪ ವಿ. ಸುವರ್ಣ, ಶೋಭಾ ಕಲ್ಮಾಡಿ ಹಾಗೂ ಪ್ರಭಾವತಿ ಯಾದವ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 32 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯು ಶೇ.100 ಫಲಿತಾಂಶ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕಾವ್ಯ ಜೆ. ಕೋಟ್ಯಾನ್ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರವಾತಿ ಕೆ. ಅವರನ್ನು ಸನ್ಮಾನಿಸಲಾಯಿತು.

1001180458.jpg1001180457.jpg1001180456.jpg1001180455.jpg1001180435.jpg

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಗಳಿಸಿದ ಕೊಡವೂರು ಗ್ರಾಮದ ವ್ಯಾಪ್ತಿಯ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ನಾರಾಯಣಗುರು ಜಯಂತಿ ಪ್ರಯುಕ್ತ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಗೂ ಬಿಲ್ಲವ ಮಹಿಳಾ ಘಟಕದ ಸದಸ್ಯರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

1001180459.jpg

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಕಾಂಚನ್ ಹುಂಡೈ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸಾದ್ ರಾಜ್ ಕಾಂಚನ್, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ್ ಸಾಲ್ಯಾನ್ ಹಾಗೂ ಉದ್ಯಮಿ ಎಸ್.ಎಂ. ಇಬ್ರಾಹಿಂ ಉಪಸ್ಥಿತರಿದ್ದರು.

1001180451.jpg

ಬಹುಮಾನ ವಿಜೇತರ ಪಟ್ಟಿಯನ್ನು ಸಮಿತಿ ಸದಸ್ಯ ಕೃಷ್ಣಪ್ಪ ಜತ್ತನ್ ಹಾಗೂ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ವಿಜಯ ಜಿ. ಬಂಗೇರ ವಾಚಿಸಿದರು.

1001180453.jpg

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು. ನಾರಾಯಣಗುರು ಸೇವಾದಳದ ವತಿಯಿಂದ “ದಾಕ್ಷಾಯಿಣಿ ಪರಿಣಯ – ದಕ್ಷಾಧ್ವರ ಧ್ವಂಸ” ಯಕ್ಷ ನೃತ್ಯ ರೂಪಕ ಹಾಗೂ ಬಿಲ್ಲವ ಮಹಿಳಾ ಘಟಕದ ಸದಸ್ಯೆಯರಿಂದ “ಮಾಣಿಬಾಲೆ ಮಾಯಂದಾಲ್” ಪಾಡ್ದನ ಆಧಾರಿತ ರೂಪಕ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಮಲ್ಪೆ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಶಾಲಾಧ್ಯಕ್ಷ ನವೀನ್ ಚಂದ್ರ ಮಲ್ಪೆ, ಭಜನಾ ಸಂಚಾಲಕ ಎಂ. ಜಗದೀಶ್ ಬಂಗೇರ, ನಾರಾಯಣಗುರು ಸೇವಾದಳದ ಅಧ್ಯಕ್ಷ ಜಯ ಅಮೀನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ರವಿ, ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

1001180452.jpg

ಬಿಲ್ಲವ ಮಹಿಳಾ ಘಟಕದ ಸದಸ್ಯೆಯರು ಪ್ರಾರ್ಥನೆ ನೆರವೇರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಎಂ. ಲಕ್ಷ್ಮೀಶ ಬಂಗೇರ ವಂದಿಸಿದರು. ಶಾಲಾ ಕಾರ್ಯದರ್ಶಿ ಕುಶ ಬಂಗೇರ ಹಾಗೂ ಸಂಘದ ಸಮಿತಿ ಸದಸ್ಯರಾದ ಕರುಣಾಕರ ಬಂಗೇರ ಮತ್ತು ಹರಿನಾಥ್ ಕೆ. ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಯನ್ನು ಬಿಲ್ಲವ ಮಹಿಳಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಭಾಗ್ಯಶ್ರೀ ಎಂ. ನಡೆಸಿಕೊಟ್ಟರು.