ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಜ್ಯದ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದೆ.

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಜ್ಯದ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದೆ.
ಹಿರಿಯ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಪದ್ಮರಾಜ್ ಪೂಜಾರಿ ಅವರ ನೇಮಕಾತಿ ಆದೇಶವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೊರಡಿಸಿದ್ದಾರೆ.
ಕಾಂಗ್ರೆಸ್‌ನ ‘ಸಂಘಟನಾ ಸೃಜನ ಅಭಿಯಾನ’ದ ಭಾಗವಾಗಿ ಈ ನೇಮಕಾತಿಗಳನ್ನು ಮಾಡಲಾಗಿದೆ. ಈ ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಹಾಗೂ ವಿವಿಧ ಮುಖಂಡರು ಮತ್ತು ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ, ಸಂಘಟನೆಯ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ್ದರು.
ವರದಿಗಳನ್ನು ಸಲ್ಲಿಸಿದ ಬಳಿಕ, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಲಾದ ಅಭ್ಯರ್ಥಿಗಳೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸುವುದರ ಜೊತೆಗೆ ಹಿರಿಯ ನಾಯಕರ ಅಭಿಪ್ರಾಯವನ್ನೂ ಪಡೆಯಲಾಗಿದೆ. ಈ ಪ್ರಕ್ರಿಯೆಯ ನಂತರ 35 ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
