ಬಿಲ್ಲವ ಸಂಘ ಪೂಣೆ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಗುರುಪೂಜೆಗೆ ಸಿದ್ಧತೆ ಪೂರ್ವಭಾವಿ ಸಭೆ
ಬಿಲ್ಲವ ಸಂಘ ಪೂಣೆಯ ವತಿಯಿಂದ ಸೆಪ್ಟೆಂಬರ್ 27, 2026 ರಂದು ವಿನ್ ಕರ್ ಭವನದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ಗುರುಪೂಜೆ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಕಾತ್ರಜ್ ಜಂಕ್ಷನ್ ಹೋಟೆಲ್‌ನಲ್ಲಿ ನಡೆಯಿತು.

ಪೂಣೆ: ಬಿಲ್ಲವ ಸಂಘ ಪೂಣೆಯ ವತಿಯಿಂದ ಸೆಪ್ಟೆಂಬರ್ 27, 2026 ರಂದು ವಿನ್ ಕರ್ ಭವನದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ಗುರುಪೂಜೆ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಕಾತ್ರಜ್ ಜಂಕ್ಷನ್ ಹೋಟೆಲ್‌ನಲ್ಲಿ ನಡೆಯಿತು.
ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಅಗತ್ಯವಾದ ವಿವಿಧ ವ್ಯವಸ್ಥೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಕಾರ್ಯಕ್ರಮದ ಪ್ರತಿಯೊಂದು ವಿಭಾಗದ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸಲು ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಲ್ಲವ ಸಂಘ ಪೂಣೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸೆಪ್ಟೆಂಬರ್ 27 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ಗುರುಪೂಜೆ ಕಾರ್ಯಕ್ರಮಕ್ಕೆ ಪೂಣೆಯ ಎಲ್ಲಾ ಬಿಲ್ಲವ ಸಮಾಜ ಬಾಂಧವರು ಕುಟುಂಬ ಸಮೇತರಾಗಿ ಆಗಮಿಸಿ, ಗುರುಪೂಜೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆತ್ಮೀಯ ಆಹ್ವಾನ ನೀಡಿದರು.
“ನಾವೆಲ್ಲರೂ ಒಂದಾಗಿ, ಒಗ್ಗಟ್ಟಿನಿಂದ ಕೈಜೋಡಿಸಿ ಈ ಪವಿತ್ರ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸೋಣ. ಶ್ರೀ ಗುರುದೇವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ” ಎಂದು ಸಂಘದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದರು.
