ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಅವರಿಗೆ BAMS ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್
ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಉಡುಪಿಯ ವಿದ್ಯಾರ್ಥಿನಿ ಕು. ಪ್ರಜ್ಞಾ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ…
By Billavavani

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಉಡುಪಿಯ ವಿದ್ಯಾರ್ಥಿನಿ ಕು. ಪ್ರಜ್ಞಾ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (Rajiv Gandhi University of Health Sciences) ನಡೆಸಿದ BAMS ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ (Distinction) ಗಳಿಸಿ ಸಾಧನೆ ಮಾಡಿದ್ದಾರೆ.
ಪ್ರಜ್ಞಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ತೆಂಕ ಕಜೆಕಾರು ಗ್ರಾಮದ ಶ್ರೀಮತಿ ಉಮಾವತಿ ಮತ್ತು ಶ್ರೀ ಗುಣಶೇಖರ (ಸಮೃದ್ಧಿ ಕೊಡಂಗೆ) ದಂಪತಿಯ ಪುತ್ರಿ.
BAMS ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ನೊಂದಿಗೆ ತೇರ್ಗಡೆಯಾಗಿ ಸಾಧನೆ ಮಾಡಿರುವ ಪ್ರಜ್ಞಾ ಅವರಿಗೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಮತ್ತು ವೃತ್ತಿಜೀವನಕ್ಕೆ ಶುಭ ಹಾರೈಸಿದ್ದಾರೆ.
