ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ಅಧ್ಯಕ್ಷರಾಗಿ ಪ್ರಥಮೇಶ್ ಪಿ. ಬಂಗೇರ ಆಯ್ಕೆ
ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಈ ವೇಳೆ ಘಟಕದ ಅಧ್ಯಕ್ಷರಾಗಿ ಪ್ರಥಮೇಶ್ ಪಿ. ಬಂಗೇರ ಅವರು ಆಯ್ಕೆಯಾಗಿದ್ದಾರೆ.

ಹೆಜಮಾಡಿ, ಆ. 11: ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಈ ವೇಳೆ ಘಟಕದ ಅಧ್ಯಕ್ಷರಾಗಿ ಪ್ರಥಮೇಶ್ ಪಿ. ಬಂಗೇರ ಅವರು ಆಯ್ಕೆಯಾಗಿದ್ದಾರೆ.
ಪ್ರಥಮ ಉಪಾಧ್ಯಕ್ಷರಾಗಿ ಜಯಶ್ರೀ ಸದಾಶಿವ, ದ್ವಿತೀಯ ಉಪಾಧ್ಯಕ್ಷರಾಗಿ ಕು. ಪ್ರಾಪ್ತಿ ಆರ್. ಸುವರ್ಣ, ಕಾರ್ಯದರ್ಶಿಯಾಗಿ ದೀಕ್ಷಿತ್ ಸಿ. ಪೂಜಾರಿ, ಜಂಟಿ ಕಾರ್ಯದರ್ಶಿಯಾಗಿ ಸುರೇಖಾ ಆನಂದ್ ಹಾಗೂ ಕೋಶಾಧಿಕಾರಿಯಾಗಿ ವಿಘ್ನೇಶ್ ಪೂಜಾರಿ ಆಯ್ಕೆಯಾಗಿದ್ದಾರೆ.
ಇದರೊಂದಿಗೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಅವಿನ್ ಎ. ಪೂಜಾರಿ, ಕ್ರೀಡಾ ನಿರ್ದೇಶಕರಾಗಿ ಧನುಷ್ ಎಸ್. ಸಾಲ್ಯಾನ್, ಆರೋಗ್ಯ ನಿರ್ದೇಶಕರಾಗಿ ಮನೋಹರ್ ಹೆಜಮಾಡಿ, ಸಾಂಸ್ಕೃತಿಕ ನಿರ್ದೇಶಕರಾಗಿ ವೈಷ್ಣವಿ ಪೂಜಾರಿ, ಪ್ರಚಾರ ನಿರ್ದೇಶಕರಾಗಿ ಯಶ್ಮಿತ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಜ್ಯೋತಿ ಸಚಿನ್, ನಾರಾಯಣಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ರಾಹುಲ್ ಪೂಜಾರಿ, ಸಮಾಜ ಸೇವಾ ನಿರ್ದೇಶಕರಾಗಿ ಚಂದ್ರಹಾಸ್ ಹಾಗೂ ವಿದ್ಯಾನಿಧಿ ನಿರ್ದೇಶಕರಾಗಿ ಯತಿನ್ ಆಯ್ಕೆಯಾಗಿದ್ದಾರೆ.
ಆಂತರಿಕ ಲೆಕ್ಕ ಪರಿಶೋಧಕರಾಗಿ ನಾಗವೇಣಿ, ಮಹಿಳಾ ಸಂಘಟನಾ ನಿರ್ದೇಶಕರಾಗಿ ದೀಕ್ಷಾ, ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾಗಿ ವೃಷಾಂಕ ಕೋಟ್ಯಾನ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪ್ರಜ್ವಲ್ ಎಸ್. ಸಾಲ್ಯಾನ್ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳನ್ನು ಸಂಘಟನೆಯ ಹಿರಿಯರು, ಸದಸ್ಯರು ಹಾಗೂ ಗಣ್ಯರು ಅಭಿನಂದಿಸಿದ್ದು, ಮುಂದಿನ ಅವಧಿಯಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
