Skip to content
Billava News

ಪಿಯು ಟಾಪರ್ ದಿಶಾ ಪೂಜಾರಿಗೆ ₹1 ಲಕ್ಷ ನಗದು ಪುರಸ್ಕಾರ; ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಗೌರವ

ಮೂಡುಬಿದಿರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯದಲ್ಲೇ 600ಕ್ಕೆ 600 ಅಂಕಗಳನ್ನು …

By Billavavani
ಪಿಯು ಟಾಪರ್ ದಿಶಾ ಪೂಜಾರಿಗೆ ₹1 ಲಕ್ಷ ನಗದು ಪುರಸ್ಕಾರ; ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಗೌರವ

ಮೂಡುಬಿದಿರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯದಲ್ಲೇ 600ಕ್ಕೆ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ಮೂಲ್ಕಿ) ವತಿಯಿಂದ ₹1 ಲಕ್ಷ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರ ನೇತೃತ್ವದಲ್ಲಿ ದಿಶಾ ಪೂಜಾರಿಗೆ ನಗದು ಪುರಸ್ಕಾರ ಹಾಗೂ ಸನ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಮೋಹನ್ ಆಳ್ವ ಅವರು ದಿಶಾ ಪೂಜಾರಿಯ ಸಾಧನೆಯನ್ನು ಶ್ಲಾಘಿಸಿ, ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲೂ ಇದೇ ರೀತಿಯ ಸಾಧನೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಎಂ., ಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘ ಮೂಡುಬಿದಿರೆಯ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷ ಕುಮಾರ್ ಪೂಜಾರಿ, ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು, ಶ್ರೀ ಗುರುದೇವ ಸಹಕಾರ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ಮಹಾಮಂಡಲದ ಕಾರ್ಯಕಾರಿಣಿ ಸದಸ್ಯರಾದ ಜಯಾರಾಮ್ ಕಾರಂದೂರು, ಪ್ರತಾಪ್ ಕುಮಾರ್ ಉದ್ಯಾವರ, ಸುಶಾಂತ್ ಕರ್ಕೇರಾ, ಭಾಸ್ಕರ ಅಮೀನ್, ಶ್ರೀ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಉಪಾಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಹಾಗೂ ಸುಭಾಷ್ ಕೈಪುಂಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿ ಭವಿಷ್ಯತ್ ಕೋಟ್ಯಾನ್ ಉಪಸ್ಥಿತರಿದ್ದರು.