ಯುವವಾಹಿನಿ (ರಿ.) ಮಂಗಳೂರು ಘಟಕ: ಕಸ ನಿರ್ವಹಣೆಯಲ್ಲಿ ಜನರ ಸಹಕಾರ ಅಗತ್ಯ: ನಾಗರಾಜ್ ಬಜಾಲ್
ಮಂಗಳೂರು: ಕಸವನ್ನು ಹಸಿ ಮತ್ತು ಒಣ ಕಸವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಪರಿಸರವಾದಿ ನಾಗರಾಜ್ ಬಜಾಲ್ ಹೇಳಿದರು.

ಮಂಗಳೂರು: ಕಸವನ್ನು ಹಸಿ ಮತ್ತು ಒಣ ಕಸವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಪರಿಸರವಾದಿ ನಾಗರಾಜ್ ಬಜಾಲ್ ಹೇಳಿದರು.
ಸೆ.22ರಂದು ಯುವವಾಹಿನಿ (ರಿ.) ಮಂಗಳೂರು ಘಟಕ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಕಸ ನಿರ್ವಹಣೆಯಲ್ಲಿ ತೊಡಗಿರುವವರ ಸೇವೆಯನ್ನು ಸಮಾಜ ಗೌರವಿಸಬೇಕು. ಕಸ ವಿಲೇವಾರಿ ಪ್ರದೇಶಗಳಿಂದ ಉಂಟಾಗುವ ಮಾಲಿನ್ಯ ಪರಿಸರ, ಜನರು ಹಾಗೂ ಪ್ರಾಣಿ-ಪಕ್ಷಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ವೈಜ್ಞಾನಿಕ ರೀತಿಯಲ್ಲಿ ಕಸ ನಿರ್ವಹಣೆ ಮಾಡಬೇಕು ಎಂದರು.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ‘ಹಸಿರುದಳ’ ಸಂಘಟನೆ ಮೂಲಕ ವಿವಿಧ ಪ್ರದೇಶಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದರು. ಇತರರಿಗೆ ಜಾಗೃತಿ ಮೂಡಿಸುವ ಮೊದಲು ಪ್ರತಿಯೊಬ್ಬರೂ ತಮ್ಮ ಜೀವನಶೈಲಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು ಎಂದು ಕರೆ ನೀಡಿದರು.

ಹರೀಶ್ ಕೆ. ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೀಶ್ ಕೆ. ಪೂಜಾರಿ ಅವರು ನಾಗರಾಜ್ ಬಜಾಲ್ ಅವರನ್ನು ಸ್ವಾಗತಿಸಿದರು. ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು ಅವರನ್ನು ಗೌರವಿಸಿದರು. ಕಾರ್ಯದರ್ಶಿ ಉಷಾ ಸಭಾ ವರದಿ ಮಂಡಿಸಿದರು. ದೀಕ್ಷಾ ಸಾಲ್ಯಾನ್ ಗುರು ಸಂದೇಶ ವಾಚಿಸಿದರು. ಜಯಂತಿ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.
