Skip to content
Billava News

ಚಿಲಿಂಬಿ: ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಟ್ರಸ್ಟ್‌ನ ಅಧ್ಯಕ್ಷರಾಗಿ ರಾಜೇಂದ್ರ ಚಿಲಿಂಬಿ ಪುನರಾಯ್ಕೆ

ಮಂಗಳೂರು: ಚಿಲಿಂಬಿ–ಆದರ್ಶನಗರದ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಟ್ರಸ್ಟ್ (ರಿ.)ನ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ವಠಾರದಲ್ಲಿ ನಡೆಯಿತು.

By Billavavani
ಚಿಲಿಂಬಿ: ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಟ್ರಸ್ಟ್‌ನ ಅಧ್ಯಕ್ಷರಾಗಿ ರಾಜೇಂದ್ರ ಚಿಲಿಂಬಿ ಪುನರಾಯ್ಕೆ

ಮಂಗಳೂರು: ಚಿಲಿಂಬಿ–ಆದರ್ಶನಗರದ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಟ್ರಸ್ಟ್ (ರಿ.)ನ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಟ್ರಸ್ಟ್‌ನ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ವರದಿ ಮತ್ತು ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿ, ಚರ್ಚಿಸಿ ಅನುಮೋದಿಸಲಾಯಿತು.

ನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಟ್ರಸ್ಟಿ ಹಾಗೂ ದೇಯಿ ಬೈದ್ಯೆತಿ–ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ವಕ್ತಾರರಾಗಿರುವ ರಾಜೇಂದ್ರ ಚಿಲಿಂಬಿ ಅವರನ್ನು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಯಿತು.

ಗುರಿಕಾರರು ರವಿ ಕೋಟ್ಯಾನ್, ಉಪಾಧ್ಯಕ್ಷರಾಗಿ ಲವೀನ್ ಪೂಜಾರಿ ಹಾಗೂ ಜಯರಾಮ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಕುಮಾರ್, ಜೊತೆ ಕಾರ್ಯದರ್ಶಿಯಾಗಿ ಮಿಥುನ್ ಗೌತಮ್, ಸಂಘಟನಾ ಕಾರ್ಯದರ್ಶಿಗಳಾಗಿ ಹರಿಶ್ಚಂದ್ರ, ಗೋಪಾಲ್ ಅಮೀನ್ ಹಾಗೂ ದಯಾನಂದ ಕುಮಾರ್, ಕೋಶಾಧಿಕಾರಿಯಾಗಿ ಸುಚಿತ್ರ ವೈ ಹಾಗೂ ಜೊತೆ ಕೋಶಾಧಿಕಾರಿಯಾಗಿ ಕಿಶೋರ್ ಎಸ್. ಕೋಟ್ಯಾನ್ ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಸುಬ್ರಮಣ್ಯ ಭಟ್, ರವಿ ಪೂಜಾರಿ ಚಿಲಿಂಬಿ ಹಾಗೂ ವಾಸುದೇವ ಗೌಡ ಅವರನ್ನು ಆಯ್ಕೆ ಮಾಡಲಾಯಿತು.