Skip to content
Billava News

ರವಿ ಪೂಜಾರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಶೈಕ್ಷಣಿಕ ಕ್ಷೇತ್ರವನ್ನು ಕೇವಲ ಉದ್ಯೋಗವನ್ನಾಗಿ ಪರಿಗಣಿಸದೆ, ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಇತಿಹಾಸ ನಿರ್ಮಿಸುವ ಸಂಕಲ್ಪದೊಂದಿಗೆ ಸೇವೆ ಸಲ್ಲಿಸುತ್ತಿರುವ ರವಿ ಪೂಜಾರಿಯವರು ಕರ್ನಾಟಕ ...

By Billavavani
ರವಿ ಪೂಜಾರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಶೈಕ್ಷಣಿಕ ಕ್ಷೇತ್ರವನ್ನು ಕೇವಲ ಉದ್ಯೋಗವನ್ನಾಗಿ ಪರಿಗಣಿಸದೆ, ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಇತಿಹಾಸ ನಿರ್ಮಿಸುವ ಸಂಕಲ್ಪದೊಂದಿಗೆ ಸೇವೆ ಸಲ್ಲಿಸುತ್ತಿರುವ ರವಿ ಪೂಜಾರಿಯವರು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವು ಮಕ್ಕಳ ಬದುಕಿನ ಬುನಾದಿ ಎಂಬುದನ್ನು ತಮ್ಮ ಕಾರ್ಯಚಟುವಟಿಕೆಗಳ ಮೂಲಕ ಸಾಬೀತುಪಡಿಸಿರುವ ಅವರು, ಗ್ರಾಮೀಣ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಭವಿಷ್ಯ ನಿರ್ಮಾಣಕ್ಕೆ ಅಗತ್ಯವಾದ ವಾತಾವರಣ ಕಲ್ಪಿಸುವಲ್ಲಿ ಅವರ ಸೇವೆ ಗಮನಾರ್ಹವಾಗಿದೆ.

ಪ್ರಸ್ತುತ ನೂಜಿ ಆಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿರುವ ರವಿ ಪೂಜಾರಿಯವರು, ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಾಗಿ ಹಲವು ರೀತಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆತ್ಮವಿಶ್ವಾಸ, ಸಂಘಟನಾ ಸಾಮರ್ಥ್ಯ ಹಾಗೂ ನಾಯಕತ್ವ ಗುಣಗಳಿಂದ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಅವರು ಸಕ್ರಿಯರಾಗಿದ್ದು, ನಾಟಕ ರಂಗದಲ್ಲಿ ಅಭಿನಯದೊಂದಿಗೆ ನೇಪಥ್ಯ ನಿರ್ವಹಣೆಯಲ್ಲಿಯೂ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಸಂಘಟನಾತ್ಮಕ ಚಟುವಟಿಕೆಗಳಲ್ಲಿ ನಾಯಕತ್ವ ವಹಿಸುವ ಮೂಲಕವೂ ಗುರುತಿಸಿಕೊಂಡಿದ್ದಾರೆ.

ಶಿಕ್ಷಣ, ಸಂಸ್ಕೃತಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರವಿ ಪೂಜಾರಿಯವರಿಗೆ ಪ್ರತಿಷ್ಠಿತ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಅವರ ಸೇವೆಗೆ ಸಂದ ಗೌರವವಾಗಿದೆ. ಪ್ರಶಸ್ತಿಗೆ ಆಯ್ಕೆಯಾಗಿರುವ ರವಿ ಪೂಜಾರಿಯವರಿಗೆ ಶಿಕ್ಷಣಾಭಿಮಾನಿಗಳು, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.