Skip to content
Billava News

ಮಸ್ಕತ್‌ನಲ್ಲಿ ಸತ್ಯನಾರಾಯಣ ಪೂಜೆ ಹಾಗೂ ನಾರಾಯಣ ಗುರು ಜಯಂತಿ ಆಚರಣೆ

ಓಮಾನ್ ಬಿಲ್ಲವಾಸ್ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ದಾರ್ಸೈತ್‌ನ ಶ್ರೀಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಭಕ್ತಿಭಾವದಿಂದ ನೆರವೇರಿತು.

By Billavavani
ಮಸ್ಕತ್‌ನಲ್ಲಿ ಸತ್ಯನಾರಾಯಣ ಪೂಜೆ ಹಾಗೂ ನಾರಾಯಣ ಗುರು ಜಯಂತಿ ಆಚರಣೆ

ಮಸ್ಕತ್: ಓಮಾನ್ ಬಿಲ್ಲವಾಸ್ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ದಾರ್ಸೈತ್‌ನ ಶ್ರೀಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಭಕ್ತಿಭಾವದಿಂದ ನೆರವೇರಿತು. ಓಮಾನ್‌ನ ಬಿಲ್ಲವ ಸಮುದಾಯದ ಸದಸ್ಯರು ಸೇರಿದಂತೆ ಅನೇಕ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

1001181544.jpg1001181540.jpg

ಗಣಪತಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಮಹಿಳಾ ತಂಡದ ನೇತೃತ್ವದಲ್ಲಿ ಕಳಶ ನೃತ್ಯ ಮೆರವಣಿಗೆ ನಡೆಯಿತು. ಮಂಗಳೂರು ಕಂಕನಾಡಿ ಬೈದರ್ಕಳ ಗರಡಿಯ ಅರ್ಚಕರಾದ ಶ್ರೀ ಹರೀಶ್ ಶಾಂತಿ ಅವರು ವೇದೋಕ್ತ ವಿಧಿ-ವಿಧಾನಗಳೊಂದಿಗೆ ಶ್ರೀ ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿ, ಸತ್ಯನಾರಾಯಣ ವ್ರತಕಥೆಯನ್ನು ಪ್ರಸ್ತುತಪಡಿಸಿದರು. ಶ್ರೀ ಉಮೇಶ್ ಜೆಪ್ಪು ಅವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪೂಜಾ ವಿಧಿಗಳನ್ನು ನೆರವೇರಿಸಿದರು.

1001181541.jpg

ಶ್ರೀಮತಿ ಗೀತಾ ಹರಿಪ್ರಸಾದ್ ಅವರ ನೇತೃತ್ವದ ‘ಭಕ್ತಿ ಲಹರಿ’ ಭಜನಾ ತಂಡದಿಂದ ಭಕ್ತಿಗೀತೆಗಳ ಗಾಯನ ನಡೆಯಿತು. ಚೆಂಡೆ ವಾದನದೊಂದಿಗೆ ಮಹಾಪೂಜೆ ಹಾಗೂ ಮಂಗಳಾರತಿ ನೆರವೇರಿತು.

1001181546.jpg1001181548.jpg

ಓಮಾನ್‌ನಲ್ಲಿರುವ ಭಾರತದ ಗೌರವಾನ್ವಿತ ರಾಯಭಾರಿ ಶ್ರೀ ಪ್ರಶಾಂತ್ ಪಿಸೆ ಅವರು ತಮ್ಮ ಮಾತೆಯವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಆಚರಣೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅವರ ಭೇಟಿಯನ್ನು ಡಾ. ಸಿ. ಕೆ. ಅಂಚನ್ ಅವರು ಸಂಯೋಜಿಸಿದ್ದರು.

1001181542.jpg

ಕಾರ್ಯಕ್ರಮದ ವ್ಯವಸ್ಥೆಯನ್ನು ಸಂಘದ ಅಧ್ಯಕ್ಷರಾದ ಉಮೇಶ್ ಬಂಟ್ವಾಳ್, ಉಪಾಧ್ಯಕ್ಷರಾದ ಹರೀಶ್ ಸುವರ್ಣ ಹಾಗೂ ಪ್ರಫುಲ್ಲ ಶಂಕರ್ ಅವರು ನಿರ್ವಹಿಸಿದರು. ಖಜಾಂಚಿ ಸುಕುಮಾರ್ ಅಂಚನ್ ಸೇರಿದಂತೆ ಸಮಿತಿ ಸದಸ್ಯರು, ಸ್ವಯಂಸೇವಕರು, ಮಹಿಳಾ ತಂಡ, ಭಜನಾ ತಂಡ ಹಾಗೂ ಭಕ್ತರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

1001181545.jpg

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಕಾರ್ಯದರ್ಶಿ ಶಿವಾನಂದ ಕೋಟ್ಯಾನ್ ಅವರು ವಂದನಾರ್ಪಣೆ ಸಲ್ಲಿಸಿದರು. ಅಂತಿಮವಾಗಿ ಮಹಾಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

1001181543.jpg